ಕರಾವಳಿ

ಬ್ಯಾಂಕ್ ಆಫ್ ಬರೋಡಾದಲ್ಲಿ ಉದ್ಯೋಗ ಅವಕಾಶ, ಕೂಡಲೇ ಅರ್ಜಿ ಹಾಕಿ

401

ನ್ಯೂಸ್ ನಾಟೌಟ್: ನೀವೇನಾದ್ರು ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿದ್ದೀರಾ? ಹಾಗಾದರೆ ಅಭ್ಯರ್ಥಿಗಳಿಗೆ ಇಲ್ಲೊಂದು ಬಂಪರ್ ಅವಕಾಶವಿದೆ. ಬ್ಯಾಂಕ್ ಆಫ್ ಬರೋಡಾದಲ್ಲಿ 3 ಬ್ಯುಸಿನೆಸ್ ಕರೆಸ್ಪಾಂಡೆಂಟ್ ಸೂಪರ್​ವೈಸರ್ ಹುದ್ದೆಗಳು ಖಾಲಿ ಇದೆ. ಆಸಕ್ತರು ಅರ್ಜಿ ಸಲ್ಲಿಸಬಹುದು.

ಡಿಸೆಂಬರ್ 20, 2022 ಅರ್ಜಿ ಹಾಕಲು ಕೊನೆಯ ದಿನ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ವಿಜಯಪುರ, ಬಾಗಲಕೋಟೆ, ರಾಯಚೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಹುದ್ದೆ: ಬ್ಯುಸಿನೆಸ್ ಕರೆಸ್ಪಾಂಡೆಂಟ್ ಸೂಪರ್​ವೈಸರ್

ಒಟ್ಟು ಹುದ್ದೆ: 3

ವೇತನ ಮಾಸಿಕ ₹ 10,000-15,000

ಉದ್ಯೋಗ ಸ್ಥಳ: ವಿಜಯಪುರ, ಬಾಗಲಕೋಟೆ, ರಾಯಚೂರು

ಬ್ಯಾಂಕ್ ಆಫ್ ಬರೋಡಾ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಂಪ್ಯೂಟರ್ಸ್​/ಐಟಿಯಲ್ಲಿ ಬಿಇ, ಎಂಎಸ್ಸಿ, ಎಂಸಿಎ, ಎಂಬಿಎ ಪೂರ್ಣಗೊಳಿಸಿರಬೇಕು.

ಬ್ಯಾಂಕ್ ಆಫ್ ಬರೋಡಾ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಕನಿಷ್ಠ 21 ವರ್ಷ ಮತ್ತು ಗರಿಷ್ಠ 45 ವರ್ಷ ಮೀರಿರಬಾರದು.

ಆಯ್ಕೆ ಪ್ರಕ್ರಿಯೆ

ಸಂದರ್ಶನ

ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.

ರೀಜನಲ್ ಮ್ಯಾನೇಜರ್

ಬ್ಯಾಂಕ್ ಆಫ್ ಬರೋಡಾ

ರೀಜನಲ್ ಆಫೀಸ್- ಗುಲ್ಬರ್ಗಾ

ನಂ-881-1-883-884

1st ಫ್ಲೋರ್

ಹಳೇ ಜೇವರ್ಗಿ ರಸ್ತೆ

ಸ್ಟೇಷನ್ ವಾರ್ಡ್

ಗುಲ್ಬರ್ಗಾ-585102

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 07/12/2022

ಅರ್ಜಿ ಸಲ್ಲಿಸಲು ಕೊನೆ ದಿನ: 20/12/2022

See also  ದಕ್ಷಿಣ ಕನ್ನಡದಲ್ಲಿ 23 ಚೆಕ್‌ಪೋಸ್ಟ್‌ಗಳ ಮೂಲಕ ಹದ್ದಿನ ಕಣ್ಗಾವಲು..! ಕೇರಳ ಕರ್ನಾಟಕ ಗಡಿಗಳಲ್ಲಿ ತೀವ್ರ ತಪಾಸಣೆ
  Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget