ನ್ಯೂಸ್ ನಾಟೌಟ್: ಪಂಜಾಬ್ ನ್ಯಾಷನಲ್ ಬ್ಯಾಂಕ್ ಕೋಟ್ಯಂತರ ರೂಪಾಯಿ ವಂಚನೆ ಪ್ರಕರಣದಲ್ಲಿ ಭಾರತದಿಂದ ಪರಾರಿಯಾಗಿದ್ದ ವಜ್ರೋದ್ಯಮಿ ಮೆಹುಲ್ ಚೋಕ್ಸಿಯನ್ನು (Mehul Choksi) ಬೆಲ್ಜಿಯಂನ ಅಧಿಕಾರಿಗಳು ಬಂಧಿಸಿದ್ದಾರೆ. ಭಾರತದ ಕೇಂದ್ರೀಯ ತನಿಖಾ ಸಂಸ್ಥೆ (CBI) ಮತ್ತು ಜಾರಿ ನಿರ್ದೇಶನಾಲಯ (ED) ಮಾಡಿದ ಕೋರಿಕೆಯ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.
65 ವರ್ಷದ ಮೆಹುಲ್ ಚೋಕ್ಸಿ, 2018ರಿಂದ ಭಾರತದಿಂದ ಪರಾರಿಯಾಗಿದ್ದರು. ಈ ವರ್ಷದ ಏ.12 ರಿಂದ ಬೆಲ್ಜಿಯಂನ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಅವರನ್ನು ಬಂಧಿಸಲಾಗಿದೆ. ಚೋಕ್ಸಿ ಆರೋಗ್ಯ ಕಾರಣಗಳಿಗಾಗಿ ಆಂಟಿಗುವಾದಿಂದ ಬೆಲ್ಜಿಯಂಗೆ ತೆರಳಿದ್ದ ಎನ್ನಲಾಗಿದೆ.
ಭಾರತೀಯ ತನಿಖಾ ಸಂಸ್ಥೆಗಳು ಆತನ ವಿರುದ್ಧ ಜಾರಿಯಲ್ಲಿರುವ ಎರಡು ಬೇಲ್ ರಹಿತ ವಾರಂಟ್‌ಗಳನ್ನು ಆಧರಿಸಿ 2024ರ ಸೆಪ್ಟೆಂಬರ್‌ನಲ್ಲಿ ಬೆಲ್ಜಿಯಂ ಸರ್ಕಾರಕ್ಕೆ ಆತನನ್ನು ಭಾರತಕ್ಕೆ ಹಸ್ತಾಂತರ ಕೋರಿ ಅರ್ಜಿ ಸಲ್ಲಿಸಿದ್ದವು. ಈ ಮನವಿಯ ಆಧಾರದ ಮೇಲೆ ಮೆಹುಲ್ ಚೋಕ್ಸಿಯನ್ನು ಬಂಧಿಸಲಾಗಿದೆ.
ಪ್ರಸ್ತುತ ಚೋಕ್ಸಿಯನ್ನು ಬೆಲ್ಜಿಯಂನ ಬಂಧನ ಕೇಂದ್ರದಲ್ಲಿ ಇರಿಸಲ್ಪಟ್ಟಿದ್ದು, ಕಳೆದ ಆರು ತಿಂಗಳಿನಿಂದ ಬೆಲ್ಜಿಯಂನಲ್ಲಿ ವಾಸಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಈ ರೈಲಿನಲ್ಲಿ ನೀವು ಪ್ರಯಾಣಿಸಿದರೆ 3 ಹೊತ್ತು ಉಚಿತ ಊಟ..! ಕಳೆದ 29 ವರ್ಷಗಳಿಂದ ಈ ಸೇವೆ..! ಇಲ್ಲಿದೆ ಸಂಪೂರ್ಣ ಮಾಹಿತಿ