ಕರಾವಳಿ

ಬಂಟ್ವಾಳ: ಬಿಸಿರೋಡಿನ ರೈಲ್ವೆ ಹಳಿಯ ಸಮೀಪ ಅಗ್ನಿ ದುರಂತ

381

ನ್ಯೂಸ್ ನಾಟೌಟ್: ಬಂಟ್ವಾಳದ ಬಿಸಿರೋಡಿನ ಬ್ರಹ್ಮ ಶ್ರೀ ನಾರಾಯಣ ಗುರು ವೃತ್ತದ ಬಳಿ ರೈಲ್ವೆ ಹಳಿಯ ಸಮೀಪ ಹಾಗೂ ಅದರ ಎದುರು ಬದಿಯಲ್ಲಿ ಬೆಂಕಿ ವ್ಯಾಪಕವಾಗಿ ಹರಡಿ ಸ್ವಲ್ಪ ಸಮಯ ನಂದಾವರಕ್ಕೆ ತೆರಳುವ ರಸ್ತೆ ಬಂದ್ ಆದ ಘಟನೆ ನಡೆದಿತ್ತು.

ಬಿಸಿರೋಡ್ ಮುಖ್ಯ ಪೇಟೆ ಹಾಗೂ ರೈಲ್ವೆ ನಿಲ್ದಾಣದ ಬಳಿ ರಸ್ತೆಯ ಇಕ್ಕೆಲಗಳಲ್ಲಿ ಬೆಂಕಿ ಹೊತ್ತಿ ಉರಿದ ಕಾರಣ ಕೆಲ ಹೊತ್ತು ಅಲ್ಲಿನ ಜನರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಸ್ಥಳೀಯರು ಅಗ್ನಿ ಶಾಮಕ ದಳದವರಿಗೆ ವಿಷಯ ತಿಳಿಸಿದರು. ಕೂಡಲೇ ಸ್ಪಂದಿಸಿದ ಅಗ್ನಿ ಶಾಮಕ ದಳ ಬೆಂಕಿ ಹೊತ್ತಿ ಉರಿದ ಜಾಗಕ್ಕೆ ನೀರು ಹಾಯಿಸಿದರು. ಸ್ಥಳೀಯರು ಮತ್ತು ಅಗ್ನಿ ಶಾಮಕ ಸಿಬ್ಬಂದಿಗಳು ಸೇರಿ ಬೆಂಕಿ ನಂದಿಸಿದರು. ಸ್ಥಳದಲ್ಲಿ ನೂರಾರು ಜನ ಜಮಾಯಿಸಿದ್ದು, ಜನರನ್ನು ಚದುರಿಸಲು ಬಂಟ್ವಾಳ ನಗರ ಠಾಣಾ ಎಸ್.ಐ ರಾಮಕೃಷ್ಣ ಮತ್ತು ತಂಡದವರು ಹರಸಾಹಸವನ್ನೇ ಪಟ್ಟರು.

See also  ಮಂಗಳೂರು:ಇ-ಸಿಗರೇಟ್ ಮತ್ತು ವಿದೇಶಿ ಸಿಗರೇಟ್ ಮಾರಾಟ – ಐವರ ಬಂಧನ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget