ನ್ಯೂಸ್ ನಾಟೌಟ್: ಅಬ್ದುಲ್ ರಹೀಂ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 15 ಮಂದಿಯ ವಿರುದ್ದ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗಾಯಗೊಂಡ ಕಲಂದರ್ ಶಫಿ ಮಾಹಿತಿ ಅನ್ವಯ ನಿಸಾರ್ ಎಂಬವರ ದೂರಿನಡಿ ರಹೀಂ ಪರಿಚಯಸ್ಥರೇ ಆಗಿರುವ ದೀಪಕ್, ಸುಮಿತ್ ಸೇರಿ 15 ಜನರ ವಿರುದ್ದ ಬಿಎನ್ ಎಸ್ 103, 109, 118(1), 118(2), 190, 191(1), 191(2), 191(3) ಅಡಿ ಎಫ್ ಐ ಆರ್ ದಾಖಲಾಗಿದೆ.
ಹಲ್ಲೆಗೈದವರ ಪೈಕಿ ಇಬ್ಬರು ಪರಿಚಯಸ್ಥರು ಎಂದು ಹಲ್ಲೆಗೊಳಗಾಗಿ ಅಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ಸಾಗಿಸುತ್ತಿದ್ದ ವೇಳೆ ಕಲಂದರ್ ಶಾಫಿ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.
ಅಬ್ದುಲ್ ರಹೀಂ ಮತ್ತು ಕಲಂದರ್ ಶಾಫಿ ಹೊಳೆ ಬದಿಯಿಂದ ಪಿಕ್ ಅಪ್ ವಾಹನದಲ್ಲಿ ಮರಳು ಲೋಡ್ ಮಾಡಿ ಕುರಿಯಾಳ ಗ್ರಾಮದ ಈರಾ ಕೋಡಿಯ ರಾಜೀವಿ ಎಂಬವರ ಮನೆ ಬಳಿ ಇಳಿಸುತ್ತಿದ್ದರು. ಈ ವೇಳೆ ಪರಿಚಯಸ್ಥರಾದ ದೀಪಕ್, ಸುಮಿತ್ ಮತ್ತು 15 ಮಂದಿ ಏಕಾಏಕಿ ದಾಳಿ ನಡೆಸಿದ್ದಾರೆ.
ಚಾಲಕನ ಸೀಟಿನಲ್ಲಿದ್ದ ಅಬ್ದುಲ್ ರಹಿಮಾನ್ ನನ್ನು ಹೊರಗೆ ಎಳೆದು ತಲವಾರು, ಚೂರಿ, ರಾಡ್ ಗಳೊಂದಿಗೆ ಯದ್ವಾ- ತದ್ವಾ ದಾಳಿ ನಡೆಸಿದ್ದಾರೆ. ಅಲ್ಲಿದ್ದವರು ಕೂಗಾಡಿದ್ದರಿಂದ ಹಲ್ಲೆ ಮಾಡಿದ ಆರೋಪಿಗಳು ಮಾರಕಾಸ್ತ್ರಗಳೊಂದಿಗೆ ಪರಾರಿಯಾಗಿದ್ದಾರೆ ಎನ್ನಲಾಗಿದೆ.
ಅನಂತ್ ನಾಗ್ ಗೆ ಪದ್ಮಭೂಷಣ ಪ್ರಶಸ್ತಿ ಪ್ರದಾನ, 300ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ ಹಿರಿಯ ನಟ