ಬಂಟ್ವಾಳ: ಅಕ್ರಮ ಮರಳುಗಾರಿಕೆ ನಡೆಯುತ್ತಿದ್ದ ಅಡ್ಡೆಗೆ ಗಣಿ ಇಲಾಖೆ ತಂಡ ದಾಳಿ ನಡೆಸಿರುವ ಘಟನೆ ನಡೆದಿದೆ. ದಾಳಿ ವೇಳೆ ಮರಳುಗಾರಿಕೆಗೆ ಬಳಸಿದ ಮೂರು ಬೋಟ್, ಮರಳನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದು ಬಂದಿದೆ. ಕಳೆದ ಕೆಲವು ತಿಂಗಳನಿಂದ ಕರಾವಳಿಯಲ್ಲಿ ಅಕ್ರಮ ಮರಳುಗಾರಿಕೆ ಪ್ರಕರಣ ಹೆಚ್ಚಾಗುತ್ತಿದ್ದು ಪೊಲೀಸ್ ಇಲಾಖೆ ಸೇರಿದಂತೆ ಸಂಬಂಧಿತ ಇಲಾಖೆಯ ಅಧಿಕಾರಿಗಳು ಕಟ್ಟೆಚ್ಚರ ವಹಿಸಿದ್ದಾರೆ.