ನ್ಯೂಸ್ ನಾಟೌಟ್ : ತೀರ ಅಚ್ಚರಿ ಅನ್ನುವ ಪ್ರಕರಣ ನಡೆದು ಬಿಟ್ಟಿದೆ. ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಕಳೆದ ನಾಲ್ಕು ತಿಂಗಳಿನಿಂದ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಖೀರಪ್ಪ (55 ವರ್ಷ) ಬಾಡಿಗೆ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಜು.20ರಂದು ದುರ್ಘಟನೆ ನಡೆದಿದೆ. ಕುಟುಂಬ ಸದಸ್ಯರಿಗೆ ಮಾಹಿತಿ ನೀಡಿ ಈ ಕೃತ್ಯಕ್ಕೆ ಕೈ ಹಾಕಿದ್ದಾರೆ ಎಂದು ತಿಳಿದು ಬಂದಿದೆ. ಆತ್ಮಹತ್ಯೆಗೆ ವೈಯಕ್ತಿಕ ಹಾಗೂ ಹಣಕಾಸಿನ ಸಮಸ್ಯೆಯೇ ಕಾರಣ ಎಂದು ತಿಳಿದು ಬಂದಿದೆ. ಖೀರಪ್ಪ ಅವರು ಮೂಲತಃ ಉತ್ತರ ಕನ್ನಡದ ಕಾರವಾರದವರು. ಶನಿವಾರ ಗಸ್ತು ಕರ್ತವ್ಯ ನಿರ್ವಹಿಸಿ ಬಂದಿದ್ದರು. ಮರುದಿನ ಕರ್ತವ್ಯಕ್ಕೆ ಹಾಜರಾಗಿರಲಿಲ್ಲ. ದಿಢೀರ್ ಕರ್ತವ್ಯಕ್ಕೆ ಹಾಜರಾಗದೆ ಇದ್ದುದರಿಂದ ಅನುಮಾನಗೊಂಡು ಮನೆ ಬಳಿಗೆ ಠಾಣಾ ಸಿಬ್ಬಂದಿ ತೆರಳಿ ಪರಿಶೀಲನೆ ನಡೆಸಿದಾಗ ವಿಚಾರ ತಿಳಿದು ಬಂದಿದೆ. ಈ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ಯು.ಡಿ.ಆರ್ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ತನಿಖೆ ನಡೆಸಲಾಗುತ್ತಿದೆ.