ಬೆಂಗಳೂರುರಾಜಕೀಯ

ನಾಳೆ(ಆ.26) ಬೆಂಗಳೂರಿನಾದ್ಯಂತ ಮಾಂಸ ಮಾರಾಟಕ್ಕೆ ನಿಷೇಧ..! ಬಿಬಿಎಂಪಿ ಪಶುಪಾಲನೆ ವಿಭಾಗದ ಜಂಟಿ ನಿರ್ದೇಶಕರಿಂದ ಆದೇಶ

ನ್ಯೂಸ್ ನಾಟೌಟ್: ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಆಗಸ್ಟ್​ 26ರ ಸೋಮವಾರದಂದು ಇಡೀ ಬೆಂಗಳೂರಿನಾದ್ಯಂತ ಮಾಂಸ ಮಾರಾಟಕ್ಕೆ ನಿಷೇಧ ಹೇರಲಾಗಿದೆ. ನಾಳೆ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ಬಂದ್ ಮಾಡಬೇಕೆಂದು ಬಿಬಿಎಂಪಿ ಪಶುಪಾಲನೆ ವಿಭಾಗದ ಜಂಟಿ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ.

ಕೃಷ್ಣ ಜನ್ಮಾಷ್ಟಮಿ ದಿನದಂದು ಮಾಂಸ ಮಾರಾಟ ನಿಷೇಧಿಸಿ ಆದೇಶ ಹೊರಡಿಸಲಾಗಿದ್ದು, ಆ ದಿನ ಯಾರೂ ಯಾವುದೇ ರೀತಿಯ ಮಾಂಸ ಹಾಗೂ ಹಸಿ ಮೀನು ಮಾರಾಟ ಮಾಡಬಾರದು ಎಂದು ತಿಳಿಸಿದೆ. ಪಟ್ಟಣದ ಯಾವುದೇ ಮಾಂಸ ಮಾರಾಟದ ಅಂಗಡಿಗಳು, ಕೋಳಿ ಅಂಗಡಿಗಳು, ಮೀನುಮಾರಾಟ ಮಾಡಬಾರದು ಎಂದು ಖಡಕ್ ಆಗಿ ಸೂಚಿಸಲಾಗಿದೆ. ಆದೇಶ ಮೀರಿ ಮಾರಾಟ ಮಾಡಿದರೆ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದೆಂದು ಎಚ್ಚರಿಸಿದ್ದಾರೆ.
ಈ ವರ್ಷ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಆಗಸ್ಟ್‌ 26 ರಂದು ಆಚರಿಸುವ ಪ್ರಯುಕ್ತ ಈ ಕ್ರಮ ಕೈಗೊಳ್ಳಲಾಗಿದೆ.

Click

https://newsnotout.com/2024/08/ramamandira-trus-reveals-financial-income-kannada-news/
https://newsnotout.com/2024/08/police-kannada-news-9684-cases-number-plat-kannada-news/

Related posts

4ನೇ ಬಾರಿ CM ಆಗಿ ಪ್ರಮಾಣ ವಚನ ಸ್ವೀಕರಿಸಿದ ಚಂದ್ರಬಾಬು ನಾಯ್ಡು..! ಆಂಧ್ರಕ್ಕೆ ಬಂದ ನರೇಂದ್ರ ಮೋದಿ, ಇಲ್ಲಿದೆ ವಿಡಿಯೋ

“ಹಿಜಾಬ್, ಹಲಾಲ್, ಆಜಾನ್ ಅಂತ ಗಲಾಟೆ ಎಬ್ಬಿಸಿದ್ರೆ ಜೈಲು ಸೇರ್ತಿರಿ” ಚಕ್ರವರ್ತಿ ಸೂಲಿಬೆಲೆಗೆ ಸಚಿವ ಎಂಬಿ ಪಾಟೀಲ್ ಎಚ್ಚರಿಕೆ

ಕೊಲೆ ಕೇಸ್ ​ನಲ್ಲಿ ದರ್ಶನ್​ ವಿರುದ್ಧ ಚಾರ್ಜ್​ಶೀಟ್ ನಲ್ಲಿರುವ ಆರೋಪಗಳೇನು..? 3,991 ಪುಟಗಳ ಚಾರ್ಜ್ ಶೀಟ್ ನಲ್ಲಿ 231ಕ್ಕೂ ಹೆಚ್ಚು ಸಾಕ್ಷಿದಾರರ ಹೇಳಿಕೆಗಳ ಉಲ್ಲೇಖ