Latest

ಚಾಂಪಿಯನ್ ಟ್ರೋಫಿ ಗೆದ್ದ ಟೀಂ ಇಂಡಿಯಾಕ್ಕೆ ಕೋಟಿ.. ಕೋಟಿ ಸುರಿಮಳೆ! ಪ್ರತಿಯೊಬ್ಬ ಆಟಗಾರನಿಗೆ ಸಿಕ್ಕಿದ್ದೆಷ್ಟು ಗೊತ್ತಾ?

627

ನ್ಯೂಸ್‌ ನಾಟೌಟ್:ಈ ಬಾರಿಯ ಚಾಂಪಿಯನ್ಸ್ ಟ್ರೋಫಿ ವಿಜೇತ ಭಾರತ ತಂಡಕ್ಕೆ ಬಿಸಿಸಿಐ ಭರ್ಜರಿ ನಗದು ಬಹುಮಾನ ಘೋಷಣೆ ಮಾಡಿದೆ.ಮಾ.9 ರಂದು ನಡೆದ ಚಾಂಪಿಯನ್ಸ್ ಟ್ರೋಫಿಯ ಫೈನಲ್ಸ್ನಲ್ಲಿ ಭಾರತ ಗೆಲುವು ಸಾಧಿಸಿದ್ದು, ಇಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಬರೋಬ್ಬರಿ 58 ಕೋಟಿ ರೂ.ಗಳ ನಗದು ಬಹುಮಾನವನ್ನು ಪ್ರಕಟಿಸಿದೆ.ಕಳೆದ ವರ್ಷ ಬಾರ್ಬಡೋಸ್‌ನಲ್ಲಿ ನಡೆದ ಟಿ20 ವಿಶ್ವಕಪ್ ಗೆದ್ದ ಬಳಿಕ ಭಾರತ ತಂಡಕ್ಕೆ ಬಿಸಿಸಿಐ 125 ಕೋಟಿ ರೂ.ಗಳ ನಗದು ಬಹುಮಾನ ನೀಡಿ ಗೌರವಿಸಿತ್ತು.

ರೋಹಿತ್ ಶರ್ಮಾ ನಾಯಕತ್ವದಲ್ಲಿ ಭಾರತ ತಂಡವು ಎಲ್ಲಾ ಪಂದ್ಯಗಳನ್ನು ಗೆದ್ದುಕೊಂಡಿದ್ದು, ಮೊದಲ ಪಂದ್ಯದಲ್ಲೇ ಬಾಂಗ್ಲಾದೇಶ ವಿರುದ್ಧ 6 ವಿಕೆಟ್‌ಗಳಿಂದ ಗೆಲುವು ಸಾಧಿಸಿದ್ದ ಭಾರತ ಬಳಿಕ ಪಾಕಿಸ್ತಾನ ವಿರುದ್ಧ ಆರು ವಿಕೆಟ್‌ಗಳ ಜಯ ಸಾಧಿಸಿ ಹೆಮ್ಮೆಯಿಂದ ಬೀಗಿತ್ತು. ನ್ಯೂಜಿಲೆಂಡ್ ವಿರುದ್ಧ 44 ರನ್‌ಗಳ ಜಯ ಹಾಗೂ ಸೆಮಿಫೈನಲ್ ನಲ್ಲಿ ಆಸ್ಟ್ರೇಲಿಯಾ ವಿರುದ್ಧ 4 ವಿಕೆಟ್‌ಗಳ ಜಯ ಸಾಧಿಸಿ ಫೈನಲ್ ಪ್ರವೇಶಿಸಿ ಕ್ರಿಕೆಟ್‌ ಅಭಿಮಾನಿಗಳ ಸಂತಸವನ್ನು ಇಮ್ಮಡಿಗೊಳಿಸುವಂತೆ ಮಾಡಿತ್ತು.

ಬಳಿಕ ಮಾರ್ಚ್ 9 ರಂದು ನಡೆದ ಫೈನಲ್‌ನಲ್ಲಿ ಭಾರತ ತಂಡವು ನ್ಯೂಜಿಲೆಂಡ್ ವಿರುದ್ಧ ನಾಲ್ಕು ವಿಕೆಟ್‌ಗಳ ಜಯ ಸಾಧಿಸಿ ಮೂರನೇ ಬಾರಿ ಚಾಂಪಿಯನ್ಸ್ ಟ್ರೋಫಿಯನ್ನು ಮುಡಿಗೇರಿಸಿಕೊಂಡಿತ್ತು. ಚಾಂಪಿಯನ್ಸ್ ಟ್ರೋಫಿ ಗೆದ್ದ ಭಾರತಕ್ಕೆ ಐಸಿಸಿ 20 ಕೋಟಿ ರೂ. ನೀಡಿದರೆ, ರನ್ನರ್ ಅಪ್ ನ್ಯೂಜಿಲೆಂಡ್ ಗೆ 1.12 ಮಿಲಿಯನ್ ಡಾಲರ್ (9.72 ಕೋಟಿ ರೂ.) ನಗದು ಬಹುಮಾನ ನೀಡಿದೆ.

See also  ಶೌಚ ಗುಂಡಿ ಸ್ವಚ್ಛಗೊಳಿಸುವಾಗ ಉಸಿರುಗಟ್ಟಿ ಮೂವರು ಸಾವು..! ತಂದೆ, ಮಗಳು, ಅಳಿಯನ ದುರಂತ ಅಂತ್ಯ..!
  Ad Widget   Ad Widget   Ad Widget   Ad Widget   Ad Widget   Ad Widget   Ad Widget