ಕರಾವಳಿಸುಳ್ಯ

ಬೆಳ್ಳಾರೆ : ಆ್ಯಸಿಡ್ ಸೇವಿಸಿ ಮಹಿಳೆ ಸೂಸೈಡ್‌ಗೆ ಯತ್ನ,ಮನೆಯಲ್ಲಿ ಯಾರು ಇಲ್ಲದ ಸಂದರ್ಭದಲ್ಲಿ ಘಟನೆ

189

ನ್ಯೂಸ್‌ ನಾಟೌಟ್‌ : ಮಹಿಳೆಯೋರ್ವರು ರಬ್ಬರ್ ಶೀಟ್ ಮಾಡಲು ಬಳಸುವ ಆ್ಯಸಿಡ್ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಸುಳ್ಯದ ಬೆಳ್ಳಾರೆಯಿಂದ ವರದಿಯಾಗಿದೆ.ಮನೆಯಲ್ಲಿ ಯಾರು ಇಲ್ಲದ ಸಂದರ್ಭದಲ್ಲಿ ಮಹಿಳೆಯು ಆ್ಯಸಿಡ್ ಸೇವಿಸಿ ತನ್ನ ಸಹೋದ್ಯೋಗಿಗೆ ಕರೆಮಾಡಿ ತಿಳಿಸಿದ್ದಾರೆ ಎನ್ನಲಾಗಿದೆ.

ಅವರು ತಕ್ಷಣ ಮನೆಯವರಿಗೆ ವಿಚಾರ ತಿಳಿಸಿ ಆಟೋ ರಿಕ್ಷಾದ ಮೂಲಕ ಆಸ್ಪತ್ರೆಗೆ ಸಾಗಿಸುವ ವ್ಯವಸ್ಥೆಯನ್ನು ಮಾಡಿದರು. ಅಷ್ಟರಲ್ಲಿ ಮಹಿಳೆಯು ವಾಂತಿ ಮಾಡಲು ಪ್ರಾರಂಭಿಸಿದ್ದಾರೆ. ಬೆಳ್ಳಾರೆಯ ಆಸ್ಪತ್ರೆಯ ವೈದ್ಯರ ಸಲಹೆ ಮೇರೆಗೆ ಇದೀಗ ಮಂಗಳೂರಿನ ಎ ಜೆ ಆಸ್ಪತ್ರೆಗೆ ದಾಖಲಿಸಲಾಗಿದೆ.

See also  ಬೆಳ್ಳಾರೆಯ ಜ್ಞಾನಗಂಗಾ ಶಾಲೆ ಬಳಿ ಬೆಂಕಿ ಅನಾಹುತ!
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget