ಕರಾವಳಿ

ಹಿಂದೂ ಕಾರ್ಯಕರ್ತನಿಗೆ ಕೊಲೆ ಬೆದರಿಕೆ: 24 ಗಂಟೆಯಲ್ಲಿ ಬೆಳ್ಳಾರೆ ಬಂದ್ ?

555

ನ್ಯೂಸ್ ನಾಟೌಟ್: ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರ್ ಹತ್ಯೆಯ ಆರೋಪಿಯ ಸಹೋದರ ಹಿಂದೂ ಕಾರ್ಯಕರ್ತನಿಗೆ ಬೆದರಿಕೆಯೊಡ್ಡಿದ ಪ್ರಕರಣ ಇದೀಗ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದೆ. ಆರೋಪಿಯನ್ನು ಕೂಡಲೇ ಬಂಧಿಸಬೇಕು ಅನ್ನುವ ಒತ್ತಾಯವನ್ನು ಹಿಂದೂ ಮುಖಂಡರು ವ್ಯಕ್ತಪಡಿಸಿದ್ದಾರೆ. ಎಸ್‌ಡಿಪಿಐ ಪಕ್ಷದ ವಿರುದ್ಧ ಇದೇ ವೇಳೆ ಭಾರಿ ಆಕ್ರೋಶ ವ್ಯಕ್ತವಾಗಿದೆ.

ಹಿಂದೂ ಕಾರ್ಯಕರ್ತನಿಗೆ ಬೆದರಿಕೆ ಬಂದ ವಿಚಾರ ಜಾಲತಾಣದಲ್ಲಿ ವೈರಲ್ ಆಗಿದೆ. ಕೂಡಲೇ ಹಿಂದೂ ಮುಖಂಡರು ಪೊಲೀಸ್ ಠಾಣೆಗೆ ತೆರಳಿ ಆರೋಪಿ ಸಫ್ರಿದ್ ವಿರುದ್ಧ ದೂರು ನೀಡಿದ್ದರು. ಸಮಾಜದಲ್ಲಿ ಶಾಂತಿ ಕದಡುವ ಶಕ್ತಿಗಳನ್ನು ೨೪ ಗಂಟೆಯೊಳಗೆ ಬಂಧಿಸಬೇಕು. ಇಲ್ಲದಿದ್ದರೆ ಬೆಳ್ಳಾರೆ ಬಂದ್ ಮಾಡಲಾಗುವುದು ಎಂದು ಇದೇ ವೇಳೆ ಎಚ್ಚರಿಸಿದ್ದಾರೆ. ಕೊಲೆ ಬೆದರಿಕೆ ಹಾಕಿದ್ದಾನೆ ಎನ್ನಲಾದ ಸಫ್ರೀದ್ ಎಸ್ ಡಿಪಿಐ ಬೂತ್ ಸಮಿತಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾನೆ. ಸದ್ಯ ಈತ ಅತಿರೇಕದ ವರ್ತನೆ ತೋರಿದ್ದಾನೆ ಎಂದು ಸ್ಥಳೀಯರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇತ್ತೀಚೆಗಷ್ಟೇ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ ನಡೆದಿತ್ತು. ಈ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದ ಪ್ರಮುಖ ಆರೋಪಿ ಶಫೀಕ್ ಬೆಳ್ಳಾರೆಯ ಸಹೋದರ ಎಂದು ತಿಳಿದು ಬಂದಿದೆ.

See also  ಪುತ್ತೂರು: ಕ.ರಾ.ರ.ಸಾ ನಿಗಮ ಬಿಸಿರೋಡ್ ಘಟಕದಲ್ಲಿ ಮೂರನೇ ವರ್ಷದ 'ಆಟಿದ ಗಮ್ಮತ್ತು', ಆಟಿ ಸಂಭ್ರಮದಲ್ಲಿ 50ಕ್ಕೂ ಹೆಚ್ಚು ಬಗೆಯ ತಿನಿಸುಗಳು
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget