ಕರಾವಳಿ

ಹಿಂದೂ ಕಾರ್ಯಕರ್ತನಿಗೆ ಪ್ರವೀಣ್ ನೆಟ್ಟಾರ್ ಹತ್ಯೆ ಆರೋಪಿಯ ತಮ್ಮನಿಂದ ಜೀವ ಬೆದರಿಕೆ

471

ನ್ಯೂಸ್ ನಾಟೌಟ್ : ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆಯ ಬಳಿಕ ಸಹಜ ಸ್ಥಿತಿಯತ್ತ ಮರಳುತ್ತಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ ತಲೆದೊರುವಂತಹ ಘಟನೆಯೊಂದು ಇಂದು ಸಂಜೆ ಜರುಗಿದೆ.

ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಶಫೀಕ್ ಎಂಬಾತನ ಸಹೋದರ ಸ್ಥಳೀಯ ಹಿಂದೂ ಸಂಘಟನೆಯ ಕಾರ್ಯಕರ್ತನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಿರುವುದಾಗಿ ಆರೋಪ ಕೇಳಿ ಬಂದಿದ್ದು, ಈ ಹಿನ್ನಲೆಯಲ್ಲಿ ಬೆಳ್ಳಾರೆ ಠಾಣೆ ಮುಂದೆ ಹಿಂದೂ ಸಂಘಟನೆಯ ಕಾರ್ಯಕರ್ತರು ಜಮಾಯಿಸಿದ ಘಟನೆ ಸೆ 10 ರಂದು ಬೆಳಿಗ್ಗೆ ಬೆಳಾರೆಯಲ್ಲಿ ನಡೆದಿದೆ. ಹಿಂದೂ ಸಂಘಟನೆಯ ಕಾರ್ಯಕರ್ತ ಹಾಗೂ ಬೆಳ್ಳಾರೆಯ ಅಮ್ಮುರೈ ಕಾಂಪ್ಲೆಕ್ಸ್ ನ ಮ್ಯಾನೇಜರ್ ಪ್ರಶಾಂತ್ ರೈವರಿಗೆ ಜೀವ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ಶಫೀಕ್ ತಮ್ಮ ಸಫ್ರಿದ್ ಜೀವ ಬೆದರಿಕೆ ಒಡ್ಡಿರುವುದಾಗಿ ಸಂಘಟನೆಯ ಕಾರ್ಯಕರ್ತರು ಆರೋಪಿಸಿದ್ದಾರೆ. ಈತ ದಿ. ಪ್ರವೀಣ್ ನೆಟ್ಟಾರ್ ಅವರ ಕೋಳಿ ಫಾರ್ಮ್ ನಲ್ಲಿ ಕ್ಲಿನಿಂಗ್ ಕೆಲಸ ಮಾಡುತ್ತಿದ್ದ ಇಬ್ರಾಹಿಂ ಎಂಬವರ ಪುತ್ರ ಎನ್ನಲಾಗಿದೆ.

See also  ಅರಂತೋಡು: ಅಡ್ಯಡ್ಕದಲ್ಲಿ ಆತ್ಮಹತ್ಯೆಗೆ ಶರಣಾದ ವ್ಯಕ್ತಿ, ಜೀವನದಲ್ಲಿ ಜಿಗುಪ್ಸೆಯಿಂದ ಆತ್ಮಹತ್ಯೆ ಶಂಕೆ
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget