ಶಿಕ್ಷಣಸುಳ್ಯ

ಬೆಳ್ಳಾರೆ ಜ್ಞಾನದೀಪದಲ್ಲಿ ಜೇಸಿಐ ಆಶ್ರಯದಲ್ಲಿ ನಾಯಕತ್ವ ತರಬೇತಿ , ಶಿಕ್ಷಕರಿಂದ ಮಾತ್ರ ಉತ್ತಮ ನಾಯಕನ ಸೃಷ್ಟಿ ಸಾಧ್ಯ ಎಂದ ತರಬೇತುದಾರ ಸವಿತಾರ ಮುಡೂರು

ನ್ಯೂಸ್‌ ನಾಟೌಟ್‌: ಬೆಳ್ಳಾರೆ ಜೇಸಿಐ ಆಶ್ರಯದಲ್ಲಿ ಬೆಳ್ಳಾರೆಯ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯಲ್ಲಿ ನಡೆದ ಪರಿಣಾಮಕಾರಿ ನಾಯಕತ್ವ ತರಬೇತಿ ಕಾರ್ಯಕ್ರಮದಲ್ಲಿ ಜೇಸಿಐ ವಲಯ ತರಬೇತುದಾರ ಸವಿತಾರ ಮುಡೂರು ತರಬೇತಿ ನೀಡಿದರು.

ಪ್ರತಿಯೊಬ್ಬರಲ್ಲೂ ನಾಯಕತ್ವದ ಗುಣವಿರುತ್ತದೆ. ವಿದ್ಯಾರ್ಥಿ ದೆಸೆಯಲ್ಲಿಯೇ ನಾಯಕತ್ವದ ಗುಣಗಳನ್ನು ಕಲಿಸಿಕೊಟ್ಟು ಸಮಾಜದಲ್ಲಿ ಉತ್ತಮ ನಾಯಕರನ್ನಾಗಿ ರೂಪಿಸುವ ಕೆಲಸ ಶಿಕ್ಷಕರಿಂದ ಮಾತ್ರ ಸಾಧ್ಯ ಎಂದು ಜೇಸಿಐ ವಲಯ ತರಬೇತುದಾರ ಸವಿತಾರ ಮುಡೂರು ಅಭಿಪ್ರಾಯಪಟ್ಟಿದ್ದಾರೆ.

ಜ್ಞಾನದೀಪ ಸಂಸ್ಥೆಯ ನಿರ್ದೇಶಕ ಉಮೇಶ್ ಮಣಿಕ್ಕಾರ ಕಾರ್ಯಕ್ರಮ ಉದ್ಘಾಟಿಸಿದರು. ಬೆಳ್ಳಾರೆ ಜೇಸಿಐ ಅಧ್ಯಕ್ಷ ಜಗದೀಶ್ ರೈ ಪೆರುವಾಜೆ ಅಧ್ಯಕ್ಷತೆ ವಹಿಸಿದ್ದರು. ವಲಯ ಉಪಾಧ್ಯಕ್ಷ, ರಾಷ್ಟ್ರೀಯ ತರಬೇತುದಾರ ದೀಪಕ್ ರಾಜ್, ನಿಕಟಪೂರ್ವಧ್ಯಕ್ಷ ರವೀಂದ್ರನಾಥ ಶೆಟ್ಟಿ ಅಜಪಿಲ,ಯಾಹಿಯ ಬೆಳ್ಳಾರೆ ಉಪಸ್ಥಿತರಿದ್ದರು.

Click

https://newsnotout.com/2024/09/tirupati-telangana-kannada-news-devotee-allegation-kannada-news/
https://newsnotout.com/2024/09/294-mobiles-phones-are-exports-illegally-to-nepal-cought-kannada-news/

Related posts

ಸುಳ್ಯ:ಕೊನೆಗೂ ಅಮ್ಮನ ಮಡಿಲು ಸೇರಿದ ಪುಟ್ಟ ಕಂದಮ್ಮ..!ತಾಯಿಯ ಬೆಚ್ಚನೆ ಅಪ್ಪುಗೆಯಲ್ಲಿ ಮರಿಯಾನೆ..!ಅರಣ್ಯ ಇಲಾಖೆಯ ಪ್ರಯತ್ನಕ್ಕೆ ಭಾರಿ ಮೆಚ್ಚುಗೆ

ಇಬ್ಬರು ವಿದ್ಯಾರ್ಥಿನಿಯರು ನೀರುಪಾಲು,ನಾಪತ್ತೆಯಾದವರಿಗಾಗಿ ಭಾರಿ ಹುಡುಕಾಟ

ಸುಳ್ಯ: ಕೆ.ವಿ.ಜಿ. ಆಯುರ್ವೇದ ಮೆಡಿಕಲ್ ಕಾಲೇಜಿನ ಧನ್ವಂತರಿ ಹಾಲ್‌ನಲ್ಲಿ ಯೋಗ ತರಬೇತಿ ಕಾರ್ಯಕ್ರಮ;ಮಹಿಳಾ ದಿನಾಚರಣೆಯ ಪ್ರಯುಕ್ತ ನಡೆದ ಮೊದಲನೇ ದಿನದ ಯೋಗ ತರಬೇತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಮಹಿಳೆಯರು