ಕರಾವಳಿಪುತ್ತೂರುರಾಜಕೀಯ

ಬೆಳ್ತಂಗಡಿ: ಬಿಜೆಪಿ ಚುನಾವಣಾ ಪ್ರಚಾರ ವಾಹನ ವಶಕ್ಕೆ

288

ನ್ಯೂಸ್‌ ನಾಟೌಟ್‌: ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದಲ್ಲಿ ಬೆಳ್ತಂಗಡಿ ಬಿಜೆಪಿ ಚುನಾವಣಾ ಪ್ರಚಾರ ವಾಹನವನ್ನು ಅಧಿಕಾರಿಗಳು ಭಾನುವಾರ ವಶಕ್ಕೆ ಪಡೆದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ.

ಬಿಜೆಪಿಯ ಚುನಾವಣಾ ಪ್ರಚಾರದ ವಾಹನದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳದ ಫೋಟೊ ಉಪಯೋಗಿಸಿದ ಬಗ್ಗೆ ಆರೋಪ ಕೇಳಿ ಬಂದಿತ್ತು. ಅಲ್ಲದೇ ಬೆಳ್ತಂಗಡಿ ಬಸ್ ನಿಲ್ದಾಣದ ಸಮೀಪ ಚುನಾವಣಾ ಪ್ರಚಾರ ಮಾಡುತ್ತಿದ್ದ ವೇಳೆ ಎಲ್.ಇ‌.ಡಿ.ಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಫೋಟೊವನ್ನು ಉಪಯೋಗಿಸುತ್ತಿರುವುದು ಕಂಡು ಬಂದ ಹಿನ್ನೆಲೆಯಲ್ಲಿ ವಾಹನವನ್ನು ವಶಪಡಿಸಿಕೊಂಡಿದ್ದಾರೆ. ವಾಹನದಲ್ಲಿ ಶ್ರೀ ಕ್ಷೇತ್ರದ ಫೋಟೊ ಬಳಸುತ್ತಿದ್ದ ಬಗ್ಗೆ ಕಾಂಗ್ರೆಸ್ ಮುಖಂಡರು ದೂರು ನೀಡಿದ್ದರು.

See also  ದ.ಕ ಜಿಲ್ಲೆಯಲ್ಲಿ ಸಂಚರಿಸುವ ಆಟೋರಿಕ್ಷಾಗಳಿಗೆ ಇನ್ಮುಂದೆ ಕಲರ್ ಕೋಡ್
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget