ಕರಾವಳಿಕ್ರೈಂಮಂಗಳೂರುವೈರಲ್ ನ್ಯೂಸ್

ಬೆಳ್ತಂಗಡಿ: ಮಕ್ಕಳನ್ನು ಬೈಕ್ ನಲ್ಲಿ ಶಾಲೆಗೆ ಕರೆದೊಯ್ಯುತ್ತಿದ್ದ ವೇಳೆ ರಸ್ತೆಯಲ್ಲಿ ಕಾಡಾನೆ ಪ್ರತ್ಯಕ್ಷ..! ಹೆದರಿ ಬೈಕ್ ಬಿಟ್ಟು ಓಡಿದ ತಂದೆ-ಮಕ್ಕಳು..!

244
pc cr: vartha bharati

ನ್ಯೂಸ್ ನಾಟೌಟ್: ಮಕ್ಕಳನ್ನು ಬೈಕ್ ನಲ್ಲಿ ಶಾಲೆಗೆ ಕರೆದೊಯ್ಯುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಘಟನೆ ಬೆಳ್ತಂಗಡಿಯ ಶಿಶಿಲದಲ್ಲಿ ಇಂದು(ನ.21) ಬೆಳಗ್ಗೆ ನಡೆದಿದೆ.

ಶಿಶಿಲ ಗ್ರಾಮದ ಕಳ್ಳಾಜೆ ನಿವಾಸಿ ವಸಂತ ಗೌಡ ಎಂಬವರು ಇಂದು ಬೆಳಗ್ಗೆ ತನ್ನ ಇಬ್ಬರು ಮಕ್ಕಳಾದ ಲಾವ್ಯಾ ಹಾಗೂ ಅದ್ವಿತ್ ರನ್ನು ಶಿಬಾಜೆ ಗ್ರಾಮದ ಪೆರ್ಲ ಶಾಲೆಗೆ ಕರೆದೊಯ್ಯುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ.

ಇಂದು ಬೆಳಗ್ಗೆ 8:30ರ ಸುಮಾರಿಗೆ ವಸಂತ ಗೌಡ ಬೈಕಿನಲ್ಲಿ ಮಕ್ಕಳನ್ನು ಕೂರಿಸಿಕೊಂಡು ಹೋಗುತ್ತಿದ್ದ ವೇಳೆ ರಸ್ತೆಯ ತಿರುವಿನ ಮಧ್ಯೆ ಏಕಾಏಕಿ ಒಂಟಿ ಸಲಗ ಕಾಣಿಸಿಕೊಂಡಿದೆ ಎನ್ನಲಾಗಿದೆ. ಭಯದಿಂದ ತನ್ನ ಬೈಕನ್ನು ತಕ್ಷಣಕ್ಕೆ ನಿಲ್ಲಿಸಿದಾಗ ನಿಯಂತ್ರಣ ತಪ್ಪಿ ಕೆಳಗೆ ಬಿದ್ದಿದ್ದಾರೆ. ಮಕ್ಕಳಿಬ್ಬರಿಬ್ಬರ ಕೈಕಾಲಿಗೆ ಗಾಯಗಳಾಗಿವೆ. ಕಾಡಾನೆ ಹತ್ತಿರ ಬರುತ್ತಿದ್ದಂತೆ ಅಲ್ಲಿಂದ ಓಡಿ ತಪ್ಪಿಸಿಕೊಂಡಿದ್ದಾರೆ.

ಓಡುತ್ತಿದ್ದಂತೆಯೇ ಬೈಕ್ ಕಡೆಗೆ ಆಗಮಿಸಿದ ಒಂಟಿ ಸಲಗ ಬೈಕನ್ನು ಸೊಂಡಿಲಿನಿಂದ ಕೆಡವಿ ಕಾಲಿನಿಂದ ತುಳಿದು ಸಂಪೂರ್ಣ ನಜ್ಜುಗುಜ್ಜುಗೊಳಿಸಿದೆ ಎಂದು ವರದಿ ತಿಳಿಸಿದೆ.

Click

https://newsnotout.com/2024/11/devotee-theft-the-saibaba-statue-kannada-news-f-temple/
https://newsnotout.com/2024/11/mahindra-thar-kannada-news-video-viral-online-viral-dd/
https://newsnotout.com/2024/11/vitla-kannada-news-panjigadde-nomore-kannada-news-f/
https://newsnotout.com/2024/11/vikram-gowda-encounter-dgp-warning-udupi-kannada-news-viral-news-d/
See also  Threat case: ಇನ್ಸ್​ಪೆಕ್ಟರ್ ಮತ್ತು ಎಸಿಪಿಗೆ ಪೊಲೀಸ್​ ಪೇದೆಯಿಂದಲೇ ಕೊಲೆ ಬೆದರಿಕೆ..! ರೌಡಿಶೀಟರ್ ಹತ್ಯೆಯ ವೇಳೆ ಕರ್ತವ್ಯಲೋಪ ಎಸಗಿದ್ದ ಪೇದೆ ಬೆದರಿಕೆ ಹಾಕಿದ್ದೇಕೆ..?
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget