ಕರಾವಳಿಕ್ರೈಂದಕ್ಷಿಣ ಕನ್ನಡಮಂಗಳೂರು

Belthangady:ಬೆಳ್ತಂಗಡಿ: ತಂದೆಯ ಎದುರಲ್ಲೇ ವಿದ್ಯುತ್ ಸ್ಪರ್ಶಿಸಿ ಮಗಳು ಸಾವು, ಪಾರ್ಸೆಲ್ ತರಲು ಓಡಿ ಬಂದ ಮಗಳಿಗೆ ಆಗಿದ್ದೇನು..?

206

ನ್ಯೂಸ್ ನಾಟೌಟ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯ ಅವಾಂತರಕ್ಕೆ ಸಾವಿನ ಸಂಖ್ಯೆಯೂ ಹೆಚ್ಚುತ್ತಿದೆ. ಇದೀಗ ಸ್ಟೇ ವೈಯರ್ ಗೆ ವಿದ್ಯುತ್ ಸ್ಪರ್ಶಿಸಿ ಯುವತಿಯೊಬ್ಬಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬೆಳ್ತಂಗಡಿ ತಾಲೂಕಿನ ಶಿಬಾಜೆ ಗ್ರಾಮದ ಬರ್ಗುಲ ಬಳಿ ನಡೆದಿದೆ.

ಮೃತ ಪಟ್ಟ ಯುವತಿಯನ್ನು ಗಣೇಶ್ ಶೆಟ್ಟಿ ಮತ್ತು ರೋಹಿಣಿ ದಂಪತಿಯ ಪುತ್ರಿ ಪ್ರತೀಕ್ಷಾ ಶೆಟ್ಟಿ (21 ವರ್ಷ) ಎಂದು ಗುರುತಿಸಲಾಗಿದೆ. ಮನೆ ಬಳಿ ಪಾರ್ಸೆಲ್ ಬಂದಿತ್ತು, ಇದನ್ನು ಸ್ವೀಕರಿಸುವುದಕ್ಕಾಗಿ ಯುವತಿ ಓಡಿದ್ದಾಳೆ. ಈ ವೇಳೆ ರಸ್ತೆಯಲ್ಲಿ ಹರಿದಾಡುತ್ತಿದ್ದ ವಿದ್ಯುತ್ ಪ್ರವಹಿಸಿದ ಪರಿಣಾಮ ಅದನ್ನು ಸ್ಪರ್ಶಿಸಿ ಪ್ರತೀಕ್ಷಾ ಸಾವಿಗೀಡಾಗಿದ್ದಾಳೆಂದು ತಿಳಿದು ಬಂದಿದೆ.

ತಕ್ಷಣ ಅವರನ್ನು ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಆಕೆ ಬದುಕುಳಿಯಲಿಲ್ಲ ಎನ್ನಲಾಗಿದೆ. ತಂದೆಯ ಎದುರಲ್ಲೇ ಉಸಿರು ಚೆಲ್ಲಿದ ಮಗಳು..! ದುರ್ಘಟನೆ ತಂದೆಯ ಎದುರಲ್ಲೇ ನಡೆದಿದೆ. ಮಗಳನ್ನು ರಕ್ಷಿಸುವುದಕ್ಕೆ ತಂದೆ ಮುಂದೆ ಬಂದಿದ್ದಾರೆ. ಈ ವೇಳೆ ಅವರಿಗೂ ವಿದ್ಯುತ್ ಶಾಕ್ ತಗುಲಿದೆ ಎನ್ನಲಾಗಿದೆ. ಯುವತಿಯ ಮೃತದೇಹ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಇರಿಸಲಾಗಿದೆ. ಸದ್ಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಗೆ ಬಲಿಯಾದವರ ಸಂಖ್ಯೆ ಏಳಕ್ಕೆ ಏರಿದಂತಾಗಿದೆ.

See also  ನಟ ಧ್ರುವ ಸರ್ಜಾನ ಮ್ಯಾನೇಜರ್ ಅರೆಸ್ಟ್..! ಜಿಮ್ ಟ್ರೈನರ್ ಮೇಲೆ ಹಲ್ಲೆ ಮಾಡಿಸಿದ್ದೇಕೆ ಈತ..?
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget