ನ್ಯೂಸ್ ನಾಟೌಟ್: ಹೊಸ ವರ್ಷದ ಪಾರ್ಟಿಯಲ್ಲಿ ಯುವಕರಿಬ್ಬರ ನಡುವೆ ಗಲಾಟೆ ನಡೆದು ಯುವಕನ ಮೂಗನ್ನು ಮತ್ತೋರ್ವ ಕಚ್ಚಿ ತುಂಡರಿಸಿದ ಘಟನೆ ಬೆಳ್ತಂಗಡಿಯ ಪಿಲ್ಯ ಎಂಬಲ್ಲಿ ಡಿ.31ರ ರಾತ್ರಿ ನಡೆದಿದೆ.
ಬೆಳ್ತಂಗಡಿಯ ಪಿಲ್ಯ ಗ್ರಾಮದ ಉಲ್ಪೆ ನಿವಾಸಿ ದೀಕ್ಷಿತ್ (28) ಎಂಬಾತನ ಮೂಗಿಗೆ ಹಾನಿಯಾಗಿದ್ದು, ದೀಕ್ಷಿತ್ ನನ್ನು ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮೂಗು ತುಂಡರಿಸಿದ ಆರೋಪಿ ಯುವಕ ರಾಕೇಶ್ ಎಂದು ಗುರುತಿಸಲಾಗಿದ್ದು, ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಆರೋಪಿ ರಾಕೇಶ್ ಮೂಲತಃ ಮೂಡಿಗೆರೆ ನಿವಾಸಿಯಾಗಿದ್ದು, ಅಂಗಡಿಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದ ಎನ್ನಲಾಗಿದೆ.
ದೀಕ್ಷಿತ್ ಹಾಗು ರಾಕೇಶ್ ಇಬ್ಬರು ಸ್ನೇಹಿತರಾಗಿದ್ದು, ಹೊಸ ವರ್ಷಾಚರಣೆ ಸಂದರ್ಭದಲ್ಲಿ ಮದ್ಯ ಸೇವಿಸಿ ಕ್ಷುಲ್ಲಕ ವಿಚಾರದಲ್ಲಿ ಸ್ನೇಹಿತ ನಡುವೆ ಗಲಾಟೆ ನಡೆದು ವಿಕೋಪಕ್ಕೆ ತಿರುಗಿ ದೀಕ್ಷಿತ್ ಮೂಗನ್ನು ರಾಕೇಶ್ ಕಚ್ಚಿದ್ದಾನೆ ಎನ್ನಲಾಗಿದೆ. ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.