ಕರಾವಳಿ

ಬೆಳ್ತಂಗಡಿ: ಹರೀಶ್ ಪೂಂಜಾ ವಿಜಯೋತ್ಸವದಲ್ಲಿ ಭಾಗಿಯಾಗಿದ್ದ ಗ್ರಾ.ಪಂ ಸಿಬ್ಬಂದಿ ಅಮಾನತು! ಉಜಿರೆ ಪಿಡಿಒ ಪ್ರಕಾಶ್ ಶೆಟ್ಟಿ ಆದೇಶ!

ನ್ಯೂಸ್ ನಾಟೌಟ್ : ಚುನಾವಣಾ ಪ್ರಚಾರದ ವೇಳೆ ಹಾಗೂ ಬಿಜೆಪಿ ಶಾಸಕ ಹರೀಶ್ ಪುಂಜಾ ವಿಜಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಆರೋಪದ ಮೇಲೆ ಉಜಿರೆ ಗ್ರಾಮ ಪಂಚಾಯತ್ ಸಿಬ್ಬಂದಿ ನಾಗೇಶ್ ನನ್ನು ಸೇವೆಯಿಂದ ಅಮಾನತುಗೊಳಿಸಿದ್ದಾರೆ ಎಂದು ವರದಿ ತಿಳಿಸಿದೆ.

ಸರ್ಕಾರಿ ಹುದ್ದೆಯಲ್ಲಿರುವವರು ಯಾವುದೇ ರಾಜಕೀಯ ಪಕ್ಷದ ಪರವಾಗಿ ತೊಡಗಿಸಿಕೊಳ್ಳಬಾರದು ಎಂದು ನಿಯವನ್ನು ಜಾರಿಗೊಳಿಸಿದ್ದರು. ಆದರೆ ನಿಯಮವನ್ನು ಮೀರಿ ಬಿಜೆಪಿ ಪಕ್ಷದ ಅಭ್ಯರ್ಥಿಯ ಪರವಾಗಿ ಮತಯಾಚನೆ ಮಾಡಿದ್ದೀರಿ ಮತ್ತು ವಿಜಯೋತ್ಸವದಲ್ಲಿ ಪಾಲ್ಗೊಂಡಿದ್ದೀರಿ ಎಂದು ಆರೋಪಿಸಲಾಗಿದೆ .

ಈ ನಿಟ್ಟಿನಲ್ಲಿ ಕಾನೂನು ಉಲ್ಲಂಘನೆ ಮಾಡಿದ ಸಿಬ್ಬಂದಿಯನ್ನು ಅಮಾನತು ಮಾಡಿ ಉಜಿರೆ ಪಿಡಿಒ ಪ್ರಕಾಶ್ ಶೆಟ್ಟಿ ಆದೇಶ ಹೊರಡಿಸಿದ್ದಾರೆ.

Related posts

ಮಂಗಳೂರು ಆಕಾಶವಾಣಿಯಲ್ಲಿ ಸುಳ್ಯದ ಉಪನ್ಯಾಸಕಿ ಡಾ. ಅನುರಾಧಾ ಕುರುಂಜಿಯವರ ಭಾಷಣ

ಸುಬ್ರಹ್ಮಣ್ಯ:ಶಾರ್ಟ್ ಸರ್ಕ್ಯೂಟ್‌ನಿಂದ ಕ್ವಾಲಿಸ್‌ನಲ್ಲಿ ಧಗಧಗನೆ ಉರಿದ ಬೆಂಕಿ,ಮುಂದೇನಾಯ್ತು?

ಗ್ಯಾರಂಟಿಗಳಿಗೆ ಷರತ್ತು ಹಾಕುವ ಮೂಲಕ 25,000 ಕೋಟಿ ರೂ. ಉಳಿತಾಯಕ್ಕೆ ಮುಂದಾದ ಸರ್ಕಾರ..? ನಕಲಿ ಬಿಪಿಎಲ್ ಕಾರ್ಡ್‌ಗಳ ಪತ್ತೆಗೆ ಹೊಸ ಕ್ರಮ..!