ಕರಾವಳಿ

ಬೆಳ್ತಂಗಡಿ: ದಶಲಕ್ಷ ಗಿಡಗಳ ನಾಟಿ-ಕೋಟಿ ವೃಕ್ಷ ಆಂದೋಲನಕ್ಕೆ ತಣ್ಣೀರುಪಂತ ಪುರುಷರ ಮಜಲು ಮೀಸಲು ಅರಣ್ಯ ಪ್ರದೇಶದಲ್ಲಿ ಡಾ.ಡಿ.ವೀರೇಂದ್ರ ಹೆಗ್ಗಡೆ ಚಾಲನೆ

ನ್ಯೂಸ್‌ ನಾಟೌಟ್‌ ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ) ಧರ್ಮಸ್ಥಳ ಮಂಗಳೂರು ಪ್ರಾದೇಶಿಕ ಅರಣ್ಯ ವಿಭಾಗ, ಪುತ್ತೂರು ಉಪ ವಿಭಾಗ, ಉಪ್ಪಿನಂಗಡಿ ವಲಯ ಸಂಯುಕ್ತ ಆಶ್ರಯದಲ್ಲಿ ರಾಜ್ಯಾದ್ಯಂತ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ”ದಶಲಕ್ಷ ಗಿಡಗಳ ನಾಟಿ ಮತ್ತು ಕರ್ನಾಟಕ ಸರ್ಕಾರದ ಅರಣ್ಯ ಇಲಾಖೆಯ “ಕೋಟಿ ವೃಕ್ಷ ಆಂದೋಲನಕ್ಕೆ ಭಾನುವಾರ (ಜು.9) ತಣ್ಣೀರುಪಂತ ಪುರುಷರ ಮಜಲು ಮೀಸಲು ಅರಣ್ಯ ಪ್ರದೇಶದಲ್ಲಿ ಚಾಲನೆ ನೀಡಲಾಯಿತು.

ಬಳಿಕ ತಣ್ಣೀರುಪಂತ ರುದ್ರಗಿರಿ ಮೃತ್ಯುಂಜಯ ದೇವಸ್ಥಾನ ವಠಾರದಲ್ಲಿ ಆಯೋಜಿಸಿದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ವಹಿಸಿದ್ದರು. ಕಾರ್ಯಕ್ರಮವನ್ನು ಶಾಸಕ ಹರೀಶ್ ಪೂಂಜ ಉದ್ಘಾಟಿಸಿದರು.

ವಿಧಾನ ಪರಿಷತ್‌ ಸದಸ್ಯ ಪ್ರತಾಪ್ ಸಿಂಹ ನಾಯಕ್, ಶ್ರೀ ಕ್ಷೇ.ಧ.ಗ್ರಾ.ಯೋ.ಧರ್ಮಸ್ಥಳದ ಕಾರ್ಯನಿರ್ವಾಹಕ ನಿರ್ದೇಶಕ ಡಾ.ಎಲ್.ಎಚ್.ಮಂಜುನಾಥ್, ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿ ಜಯಪ್ರಕಾಶ್ ಕೆ.ಕೆ., ಶ್ರೀ.ಕ್ಷೇ.ಧ.ಗ್ರಾ.ಯೋ. ಧರ್ಮಸ್ಥಳದ ಮುಖ್ಯ ನಿರ್ವಹಣಾಧಿಕಾರಿ ಅನಿಲ್ ಕುಮಾರ್ ಎಸ್.ಎಸ್. ತಣ್ಣೀರುಪಂತ ಗ್ರಾಮ ಪಂಚಾಯತ್ ಅಧ್ಯಕ್ಷೆ ಫಾತಿಮಾ ಇಶ್ರತ್, ಬೆಳ್ತಂಗಡಿ ಜನಜಾಗೃತಿ ವೇದಿಕೆ ಅಧ್ಯಕ್ಷೆ ಶಾರದಾ ಆರ್. ರೈ, ಪ್ರಗತಿಬಂಧು, ಸ್ವಸಹಾಯ ಸಂಘಗಳ ಕೇಂದ್ರ ಒಕ್ಕೂಟ ಅಧ್ಯಕ್ಷ ಸದಾನಂದ ಬಂಗೇರ, ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕ ವಿ

ವೇಕ್ ವಿ. ಪಾಯಸ್, ಉಡುಪಿ ವಿಭಾಗದ ಪ್ರಾದೇಶಿಕ ನಿರ್ದೇಶಕ ದುಗ್ಗೇ ಗೌಡ ಕೃಷಿ ವಿಭಾಗದ ಪ್ರಾದೇಶಿಕ ನಿರ್ದೇಶಕ ಮನೋಜ್ ಮಿನೇಜಸ್, ದ.ಕ. ಯೋಜನಾ ನಿರ್ದೇಶಕ ಮಹಾಬಲ್ ಕುಲಾಲ್, ಜನಜಾಗೃತಿ ವಲಯಾಧ್ಯಕ್ಷ ಪ್ರಭಾಕರ ಗೌಡ ಪೊಸಂದೋಡಿ, ಗುರುವಾಯನಕೆರೆ ಯೋಜನಾಧಿಕಾರಿ ದಯಾನಂದ ಉಪಸ್ಥಿತರಿದ್ದರು.

Related posts

60ಕ್ಕೂ ಹೆಚ್ಚು ದನಗಳ ರಕ್ತ ಕೆರೆಗೆ ಹರಿಸಿದ ಕ್ರೂರಿಗಳು..! ಮಧ್ಯರಾತ್ರಿ ದಾಳಿ ಮಾಡಿದ ಪೊಲೀಸರು

ಸುಳ್ಯ:ವಿದ್ಯಾರ್ಥಿಗಳ ಪ್ರವಾಸಕ್ಕೆಂದು ಇರಿಸಿದ್ದ ನಗದನ್ನೇ ದೋಚಿದ ಖದೀಮರು..!,ಶಾಲೆಯ ಬೀಗ ಮುರಿದು ಒಳಪ್ರವೇಶಿಸಿ ಕೃತ್ಯ

ಡಾ. ಅನುರಾಧಾ ಕುರುಂಜಿ ಮತ್ತು ಸಹನಾ ಕಾಂತಬೈಲು “ಜಿ ಎಲ್ ವುಮನ್ ಆಫ್ ಗೋಲ್ಡ್ “ ಆಗಿ ಆಯ್ಕೆ:ಮಹಿಳಾ ದಿನಾಚರಣೆ ಪ್ರಯುಕ್ತ ತಾಲೂಕಿನ ಸಾಧಕ ಮಹಿಳೆಯರನ್ನು ಗುರುತಿಸಿದ ಸಂಸ್ಥೆ