ಕರಾವಳಿ

ಬೆಳ್ತಂಗಡಿ: ವಲಯ ಅರಣ್ಯಾಧಿಕಾರಿ ತ್ಯಾಗರಾಜ್ ಅಮಾನತು !ಮರಗಳ್ಳರೊಂದಿಗೆ ಶಾಮೀಲಾದ ಆರೋಪ

ನ್ಯೂಸ್‌ ನಾಟೌಟ್‌: ಬೆಳ್ತಂಗಡಿ ತಾಲೂಕಿನ ಕಳಂಜ ಗ್ರಾಮದಲ್ಲಿ ನಡೆದಿದ್ದ ಮರಗಳ ಅಕ್ರಮ ಕಳ್ಳ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ದುರುಪಯೋಗ ಮಾಡಿದ ನೆಲೆಯಲ್ಲಿ ಇಲಾಖೆ ಕ್ರಮ ಕೈಗೊಂಡಿದ್ದು, ಬೆಳ್ತಂಗಡಿ ವಲಯ ಅರಣ್ಯಾಧಿಕಾರಿ ತ್ಯಾಗರಾಜ್ ಅವರನ್ನು ಅಮಾನತು ಮಾಡಲಾಗಿದೆ.

ಕಳಂಜ ಗ್ರಾಮದಲ್ಲಿ 2.5ಎಕ್ರೆ ಪ್ರದೇಶದಲ್ಲಿನ ಮರಗಳನ್ನು ಯಾವುದೇ ದಾಖಲೆಗಳಿಲ್ಲದೆ ಅಕ್ರಮವಾಗಿ ಕಡಿಯಲಾಗಿತ್ತು. ಆದರೆ ಇಲಾಖೆ ಕಾನೂನಿನ ಅಡಿಯಲ್ಲಿ ಕ್ರಮ ಕೈಗೊಳ್ಳದೆ ಸೊತ್ತುಗಳನ್ನು ಸಾಗಾಟ ಮಾಡಲು ಅವಕಾಶ ಮಾಡಿಕೊಟ್ಟು ಮರಗಳ್ಳರೊಂದಿಗೆ ಶಾಮೀಲಾಗಿದ್ದಾರೆ ಎಂಬ ಆರೋಪ ತ್ಯಾಗರಾಜ್‌ ಅವರ ಮೇಲಿತ್ತು. ಈ ಹಿನ್ನೆಲೆಯಲ್ಲಿ ಇಲಾಖಾ ತನಿಖೆ ನಡೆಸಿ, ಇದೀಗ ತ್ಯಾಗರಾಜ್ ಅವರನ್ನು ಅಮಾನತುಗೊಳಿಸಿ ಹೊರಡಿಸಲಾಗಿದೆ ಎಂದು ತಿಳಿದು ಬಂದಿದೆ.

Related posts

ಸುಳ್ಯ: ಮಹಮ್ಮದ್ ಮಸೂದ್ ಕೊಲೆ ಪ್ರಕರಣದ ಮತ್ತಿಬ್ಬರು ಆರೋಪಿಗಳಿಗೆ ಜಾಮೀನು? ಇಲ್ಲಿದೆ ಸಂಪೂರ್ಣ ಮಾಹಿತಿ

ಪುತ್ತೂರು: ಕಾಂಗ್ರೆಸ್ ಕಾರ್ಯಕರ್ತನ ಮೇಲೆ ದುಷ್ಕರ್ಮಿಗಳ ತಂಡದಿಂದ ದಾಳಿ, ಗಾಯಾಳು ಆಸ್ಪತ್ರೆಗೆ ದಾಖಲು, ತುರ್ತಾಗಿ ತೆರಳಿ ಆರೋಗ್ಯ ವಿಚಾರಿಸಿದ ಶಾಸಕ ಅಶೋಕ್ ರೈ

ಅರಂತೋಡು: ವರ್ಕ್ ಫ್ರಂ ಹೋಮ್‌ನಲ್ಲಿದ್ದ ಯುವಕ ನೇಣಿಗೆ ಶರಣು