ಕ್ರೈಂಬೆಂಗಳೂರು

ಕದ್ದು ಮುಚ್ಚಿ ಮಹಿಳೆಯರ ಫೋಟೋ ತೆಗೆಯುತ್ತಿದ್ದವನ ಬಂಧನ! ಬೆಂಗಳೂರು ವಿಮಾನ ನಿಲ್ದಾಣದಲ್ಲಿ ವ್ಯಕ್ತಿಯ ಅನುಚಿತ ವರ್ತನೆ!

400

ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಹಿಳೆಯೊಬ್ಬರ ಅನುಮತಿಯಿಲ್ಲದೆ ಫೋಟೋ ತೆಗೆಯುತ್ತಿದ್ದ ವ್ಯಕ್ತಿಯನ್ನು ಶನಿವಾರ ಬಂಧಿಸಲಾಗಿದೆ ಎಂದು ವರದಿ ತಿಳಿಸಿದೆ.

ಆರೋಪಿಯನ್ನು ಆಂಧ್ರಪ್ರದೇಶದ ಶ್ರೀಕಾಕುಳಂ ನಿವಾಸಿ ರವಡಾ ಲಕ್ಷ್ಮೀ ನಾರಾಯಣ ಎಂದು ಪೊಲೀಸರು ಗುರುತಿಸಿದ್ದು, ಬೆಂಗಳೂರು ವಿಮಾನ ನಿಲ್ದಾಣಕ್ಕೆ ಡೆಹ್ರಾಡೂನ್​ಗೆ ತೆರಳಲು ಮಹಿಳೆಯೊಬ್ಬರು ಆಗಮಿಸಿದ್ದರು. ಟರ್ಮಿನಲ್ ಮುಂಬಾಗ ಕಾಫಿ ಕುಡಿಯಲು ಮಹಿಳೆ ನಿಂತಿದ್ದರು. ಈ‌ ವೇಳೆ ಖದ್ದು ಮುಚ್ಚಿ ಪಕ್ಕದ ಟೇಬಲ್​ನಲ್ಲಿ ಕುಳಿತಿದ್ದ ಆಂಧ್ರ ಮೂಲದ ವ್ಯಕ್ತಿ ಮಹಿಳೆಯ ಫೋಟೋ ತೆಗೆದಿದ್ದಾನೆ ಎಂದು ಆರೋಪಿಸಲಾಗಿದೆ.

ಈ ವೇಳೆ ರೊಚ್ಚಿಗೆದ್ದ ಮಹಿಳೆ ಮೊಬೈಲ್​ನಲ್ಲಿದ್ದ ಫೋಟೋ ಸಮೇತ ಆರೋಪಿಯನ್ನು ಪೊಲೀಸರ ವಶಕ್ಕೆ ನೀಡಿದ್ದಾರೆ. ವ್ಯಕ್ತಿಯನ್ನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸರು ಬಂಧಿಸಿದ್ದಾರೆ.

ಸದ್ಯ ಪೊಲೀಸರು ಆರೋಪಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಮತ್ತು ಹೆಚ್ಚಿನ ತನಿಖೆ ನಡೆಯುತ್ತಿದೆ ಎನ್ನಲಾಗಿದೆ.

See also  ಮಂಗಳೂರಿನಲ್ಲಿ ಮತ್ತೊಂದು ನೈತಿಕ ಪೊಲೀಸ್ ಗಿರಿ, ಅನ್ಯಮತೀಯ ಜೋಡಿಗಳ ಮೇಲೆ ಹಿಂದೂ ಕಾರ್ಯಕರ್ತರ ದಾಳಿ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget