ಕ್ರೈಂವೈರಲ್ ನ್ಯೂಸ್

Bengaluru: 13 ವರ್ಷದ ಸಹೋದರನಿಂದಲೇ 3 ತಿಂಗಳ ಗರ್ಭಿಣಿಯಾದ ತಂಗಿ..! ಪೋಷಕರು ಇಲ್ಲದಿದ್ದಾಗ ಅಶ್ಲೀಲ ವಿಡಿಯೋ ನೋಡುತ್ತಿದ್ದ ಅಪ್ರಾಪ್ತರು..!

253

ನ್ಯೂಸ್ ನಾಟೌಟ್: ಸಹೋದರನಿಂದಲೇ ಗರ್ಭಿಣಿಯಾದ ಸಹೋದರಿಯ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ಅಪ್ರಾಪ್ತ ಅಣ್ಣನಿಂದ ಸಹೋದರಿ ಮೂರು ತಿಂಗಳ ಗರ್ಭಿಣಿಯಾಗಿರುವ ಘಟನೆ ಬಾಗಲಗುಂಟೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.. ಈ ಸಂಬಂಧ ಅಪ್ರಾಪ್ತನನ್ನು ವಶಕ್ಕೆ ಪಡೆದು ಬಾಲ ಮಂದಿರಕ್ಕೆ ಕಳುಹಿಸಲಾಗಿದೆ ಎನ್ನಲಾಗಿದೆ.

ಬಾಗಲ ಗುಂಟೆಯಲ್ಲಿ ಪೋಷಕರೊಂದಿಗೆ ವಾಸವಿದ್ದರು. ಮನೆಯಲ್ಲಿ ಪೋಷಕರು ಇಲ್ಲದಿರುವಾಗ ಇಬ್ಬರು ಅಶ್ಲೀಲ ವಿಡಿಯೋಗಳನ್ನು ನೋಡುತ್ತಿದ್ದರು ಎನ್ನಲಾಗಿದೆ. ಅದರಿಂದ ಪ್ರಚೋದನೆಗೊಂಡು ಇಬ್ಬರೂ ನಿರಂತರವಾಗಿ ಲೈಂಗಿಕ ಸಂಪರ್ಕ ಬೆಳೆಸಿದ್ದಾರೆ. ಬಳಿಕ ಅದರಿಂದಾಗಿ ಬಾಲಕಿ ಮೂರು ತಿಂಗಳು ಗರ್ಭಿಣಿಯಾಗಿದ್ದಾಳೆ. ಬಾಲಕಿಯಲ್ಲಿ ದೈಹಿಕ ಬದಲಾವಣೆ ಕಂಡು ಬಂದಾಗ ಪೋಷಕರು ಆಕೆ ಯನ್ನು ಖಾಸಗಿ ಅಸ್ಪತ್ರೆಗೆ ಕರೆದೊಯ್ದಿದ್ದಾರೆ. ವೈದ್ಯರು ಪರೀಕ್ಷಿಸಿದಾಗ ಬಾಲಕಿ ಮೂರು ತಿಂಗಳು ಗರ್ಭಿಣಿಯಾಗಿರುವುದು ತಿಳಿದು ಬಂದಿದೆ.

ತಕ್ಷಣ ವೈದ್ಯರು, ಬಾಗಲಗುಂಟೆ ಪೊಲೀಸ್‌ ಠಾಣೆಗೆ ಮಾಹಿತಿ ರವಾನಿಸಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಸಂತ್ರಸ್ತೆ ವಿಚಾರಣೆ ನಡೆಸಿ ಅಪ್ರಾಪ್ತ ಬಾಲಕನನ್ನು ವಶಕ್ಕೆ ಪಡೆದು ಬಾಲಮಂದಿರಕ್ಕೆ ಕಳುಹಿಸಿದ್ದಾರೆ ಎನ್ನಲಾಗಿದೆ. ಸಂತ್ರಸ್ತೆಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿ ತಿಳಿಸಿದೆ.

Click 👇

https://newsnotout.com/2024/05/dysp-cyber-case-madikeri-bank-account
https://newsnotout.com/2024/05/inspector-and-acp-threat-case
https://newsnotout.com/2024/05/lipslick-ban-in-nk-and-rules
See also  ನಟಿ ರಕ್ಷಿತಾ ಸಹೋದರನ ಸಿನಿಮಾ ಚಿತ್ರೀಕರಣ ಮಾಡುತ್ತಿದ್ದವರ ಮೇಲೆ ಅರಣ್ಯ ಇಲಾಖೆ ದಾಳಿ..! ಕ್ಯಾರವ್ಯಾನ್, ಕ್ಯಾಮರಾ ಲೈಟ್, ಅಡುಗೆ ಸಾಮಗ್ರಿ, ಚೇರ್ ​ಗಳು, ಟೆಂಪೊ ಟ್ರಾವೆಲರ್ ಗಳು ವಶಕ್ಕೆ..!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget