ನ್ಯೂಸ್ ನಾಟೌಟ್: ಗೋ ಮಾತೆಯ ಕೆಚ್ಚಲನ್ನು ಕೊಯ್ದು ಹೇಯ ಕೃತ್ಯ ಎಸಗಿದ ಪಾಪಿಯನ್ನು ಹಿಡಿಯುವಲ್ಲಿ ಪೊಲೀಸರು ಸಫಲರಾಗಿದ್ದಾರೆ.
ಬೆಂಗಳೂರಿನ ಚಾಮರಾಜಪೇಟೆಯ ವಿನಾಯಕ ನಗರದಲ್ಲಿ 3 ಹಸುಗಳ ಕೆಚ್ಚಲು ಕೊಯ್ದು ಪ್ರಕರಣದಲ್ಲಿ ಬಿಹಾರ ರಾಜ್ಯದ ಚಂಪಾರನ್ ಜಿಲ್ಲೆ ಮೂಲದವನಾಗಿರುವ ಸೈಯದ್ ನಸ್ರು (30 ವರ್ಷ) ಈಗ ಪೊಲೀಸರ ಅತಿಥಿಯಾಗಿದ್ದಾನೆ. ಈತನನ್ನು ಭಾನುವಾರ ತಡರಾತ್ರಿ (ಜ.12) ಬಂಧಿಸಿರುವುದಾಗಿ ತಿಳಿದು ಬಂದಿದೆ.
ಈತ ಘಟನೆ ನಡೆದ ಸ್ಥಳದಿಂದ 50 ಮೀಟರ್ ದೂರದಲ್ಲಿರುವ ಪ್ಲಾಸ್ಟಿಕ್ ಹಾಗೂ ಬಟ್ಟೆ ಹೊಲಿಯುವ ಅಂಗಡಿಯಲ್ಲಿ ಶೇಕ್ ನಸ್ರು ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ಆರೋಪಿಯನ್ನು ಪೊಲೀಸರು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದಾರೆ. ಜನವರಿ 24ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಹಸುಗಳ ಕೆಚ್ಚಲು ಕತ್ತರಿಸಿ ರಾಜಧಾನಿ ಬೆಂಗಳೂರಿನ ಚಾಮರಾಜಪೇಟೆಯ ವಿನಾಯಕ ನಗರದಲ್ಲಿ ವಿಕೃತಿ ಮೆರೆಯಲಾಗಿತ್ತು. ಭಾನುವಾರ ಮುಂಜಾನೆ ಈ ಘಟನೆ ಬೆಳಕಿಗೆ ಬಂದಿದ್ದುಕರ್ಣ ಎಂಬುವವರಿಗೆ ಸೇರಿದ ಮೂರು ಹಸುಗಳ ಕೆಚ್ಚಲು ಕೊಯ್ಯಲಾಗಿತ್ತು. ಪ್ರಕರಣದ ಬಳಿಕ ಕಿಡಿಗೇಡಿಗಳು ಪರಾರಿ ಆಗಿದ್ದರು. ಹಸುಗಳಿಗೆ ಚಾಮರಾಜಪೇಟೆ ಪಶು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಒಟ್ಟು 8 ಹಸುಗಳ ಸಾಕಿರುವ ಕರ್ಣ ಈ ಪೈಕಿ ಮೂರರಿಂದ ನಾಲ್ಕು ಹಸುಗಳು ಮನೆಯಿಂದ ಕೆಲವೇ ದೂರದಲ್ಲಿರುವ ರಸ್ತೆಯಲ್ಲಿ ಮಲಗಿದ್ದ ಹಸುಗಳ ಕೆಚ್ಚಲನ್ನು ತಡರಾತ್ರಿ ಕಿಡಿಗೇಡಿಗಳು ಕೊಯ್ದಿದ್ದರು. ಈ ಸಂಬಂಧ ಮಾಲೀಕ ಕರ್ಣ ಕಾಟನ್ಪೇಟೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ದೂರು ಆಧರಿಸಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆ ಖಂಡಿಸಿ ಹಿಂದೂ ಸಂಘಟನೆ ಕಾರ್ಯಕರ್ತರು, ಬಿಜೆಪಿ ಮುಖಂಡರು ಕ್ರಮಕ್ಕೆ ಆಗ್ರಹಿಸಿದ್ದರು.