ಕ್ರೈಂಬೆಂಗಳೂರುವೈರಲ್ ನ್ಯೂಸ್

ಬೆಂಗಳೂರು ವಿವಾಹೇತರ ಸಂಬಂಧಕ್ಕೆ ಡೇಟಿಂಗ್‌ ಆಪ್‌ ಬಳಕೆಯಲ್ಲಿ ದೇಶದಲ್ಲೇ ನಂ.1..! ಇಲ್ಲಿದೆ ಸಂಪೂರ್ಣ ಮಾಹಿತಿ

143

ನ್ಯೂಸ್ ನಾಟೌಟ್: ಇತ್ತೀಚೆಗೆ ಅಕ್ರಮ ಸಂಬಂಧಗಳು ವೈವಾಹಿಕ ಜೀವನವನ್ನು ಹಾಳು ಮಾಡುತ್ತಿರುವ ಸಮಯದಲ್ಲೇ ವಿವಾಹೇತರ ಸಂಬಂಧ ಬೆಸೆಯುವ ಗ್ಲೀಡನ್ ಆ್ಯಪ್‌ ನಲ್ಲಿ 30 ಲಕ್ಷಕ್ಕೂ ಹೆಚ್ಚು ಭಾರತೀಯರು ನೊಂದಾಯಿಸಿಕೊಂಡಿದ್ದು ಅದರಲ್ಲೂ ಬೆಂಗಳೂರು ಮೊದಲ ಸ್ಥಾನದಲ್ಲಿದೆ.

ವಿಶ್ವದ ಅತಿದೊಡ್ಡ ವಿವಾಹೇತರ ಡೇಟಿಂಗ್ ಪ್ಲಾಟ್‌ ಫಾರ್ಮ್‌ ಗ್ಲೀಡನ್ ಬಿಡುಗಡೆ ಮಾಡಿರುವ ವರದಿಯಂತೆ 2024 ರಲ್ಲಿ ಅಪ್ಲಿಕೇಶನ್ ತನ್ನ ಬಳಕೆದಾರರ ಸಂಖ್ಯೆಯಲ್ಲಿ 270% ರಷ್ಟು ಏರಿಕೆ ಕಂಡಿದೆ. ಹೊಸ ಬಳಕೆದಾರರ ಪೈಕಿ 128% ರಷ್ಟು ಮಂದಿ ಮಹಿಳೆಯರೇ ಆಗಿದ್ದಾರೆ. ಒಟ್ಟು ಬಳಕೆದಾರರ ಪೈಕಿ 40% ರಷ್ಟು ಮಂದಿ 30 ರಿಂದ 45 ವಯಸ್ಸಿನ ವಿವಾಹಿತ ಸ್ತ್ರೀಯರಿದ್ದಾರೆ ಎಂದು ತಿಳಿಸಿದೆ.

ಗ್ಲೀಡನ್‌ ಬಳಕೆದಾರರ ಸಂಖ್ಯೆಯಲ್ಲಿ ಬೆಂಗಳೂರು 20% ಬಳಕೆದಾರರನ್ನು ಹೊಂದುವ ಮೂಲಕ ಮೊದಲ ಸ್ಥಾನದಲ್ಲಿದೆ. ನಂತರದ ಸ್ಥಾನದಲ್ಲಿ ಮುಂಬೈ(19%), ಕೋಲ್ಕತ್ತಾ (18%), ದೆಹಲಿ (15%) ಇದೆ. ಬಳಕೆದಾರರ ಪೈಕಿ 58% ರಷ್ಟು ಮಂದಿ ಮಹಿಳೆಯರಿದ್ದಾರೆ. ಇವರು ಸುಮಾರು 45 ನಿಮಿಷಗಳ ಕಾಲ ಈ ಆ್ಯಪ್​​ನಲ್ಲಿ ಸಮಯ ಕಳೆಯುತ್ತಿದ್ದಾರೆ. ಎಲ್ಲಾ ವಯಸ್ಸಿನ ಪುರುಷರು ಮತ್ತು ಮಹಿಳೆಯರು ಈ ಅಪ್ಲಿಕೇಶನ್​ ಬಳಸುತ್ತಿದ್ದಾರೆ ಎಂದು ವರದಿ ತಿಳಿಸಿದೆ.

ಮೆಟ್ರೋ ನಗರಗಳು ಗರಿಷ್ಠ ಬಳಕೆದಾರರನ್ನು ಹೊಂದಿದ್ದರೂ ಭೋಪಾಲ್, ವಡೋದರಾ ಮತ್ತು ಕೊಚ್ಚಿಯಂತಹ ಸಣ್ಣ ನಗರಗಳಿಂದ ಬಳಕೆದಾರರ ಸಂಖ್ಯೆಯಲ್ಲಿ ಏರಿಕೆ ಕಂಡುಬಂದಿದೆ ಎಂದು ವರದಿ ತಿಳಿಸಿದೆ. ಮುಂದಿನ ದಿನಗಳಲ್ಲಿ ಗ್ಲೀಡನ್ ಭಾರತದಲ್ಲಿ 50 ಲಕ್ಷ ಗ್ರಾಹಕರನ್ನು ತಲುಪುವ ಗುರಿಯನ್ನು ಹಾಕಿಕೊಂಡಿದೆ ಎನ್ನಲಾಗಿದೆ.

Click

https://newsnotout.com/2025/01/gisar-kannada-news-police-case-twist-viral-news-d/
https://newsnotout.com/2025/01/key-pad-mobile-phone-issue-hospital-hjd/

https://newsnotout.com/2025/01/tiger-issue-viral-news-kerala-viral-news-df/

See also  2 ನೇ ತರಗತಿ ವಿದ್ಯಾರ್ಥಿನಿ ಮೇಲೆ ಆ್ಯಸಿಡ್ ಎರಚಿದರೇ ಮುಖ್ಯಶಿಕ್ಷಕ..? ಶೌಚಾಲಯ ಸ್ವಚ್ಛಗೊಳಿಸಲು ವಿದ್ಯಾರ್ಥಿನಿಯರನ್ನು ಕಳಿಸಿದ ಶಿಕ್ಷಕ ಮಾಡಿದ್ದೇನು? ಮುಂದೇನಾಯ್ತು..?
  Ad Widget   Ad Widget     Ad Widget   Ad Widget   Ad Widget   Ad Widget