ದೇಶ-ವಿದೇಶಬೆಂಗಳೂರುವೈರಲ್ ನ್ಯೂಸ್

ಬೆಂಗಳೂರು-ಗುವಾಹಟಿ ಎಕ್ಸ್​ಪ್ರೆಸ್​ ರೈಲಿನಲ್ಲಿ ಬೆಂಕಿ..! ದಟ್ಟ ಹೊಗೆ ಕಂಡು ಭಯಭೀತರಾದ ಪ್ರಯಾಣಿಕರು..!

232

ನ್ಯೂಸ್ ನಾಟೌಟ್: ಬೆಂಗಳೂರು-ಗುವಾಹಟಿ ಎಕ್ಸ್​ಪ್ರೆಸ್​ ರೈಲಿನಲ್ಲಿ ಬೆಂಕಿ, ಹೊಗೆ ಕಾಣಿಸಿಕೊಂಡಿದೆ. ಆಂಧ್ರಪ್ರದೇಶದ ಸಿಂಹಾಚಲಂ ರೈಲು ನಿಲ್ದಾಣದಲ್ಲಿ ರೈಲಿನ ಸ್ಲೀಪರ್​ ಕೋಚ್​ನಲ್ಲಿ ಏಕಾಏಕಿ ಬೆಂಕಿ (Fire) ಕಾಣಿಸಿಕೊಂಡ ಘಟನೆ ನಡೆದಿದ್ದು ಬೆಂಕಿ ಕಾಣಿಸುತ್ತಿದ್ದಂತೆ ಲೋಕೋ ಪೈಲೆಟ್ ರೈಲು ನಿಲ್ಲಿಸಿದ್ದಾರೆ. ಅದೃಷ್ಟವಶಾತ್ ಅವಘಡದಲ್ಲಿ ಯಾವುದೇ ಪ್ರಾಣಾಹಾನಿ ಸಂಭವಿಸಿಲ್ಲ.

ಶನಿವಾರ ಸಂಜೆ, 12509 ಬೆಂಗಳೂರು-ಗುವಾಹಟಿ ಎಕ್ಸ್‌ಪ್ರೆಸ್‌ನಲ್ಲಿ ಸಿಂಹಾಚಲಂ ರೈಲು ನಿಲ್ದಾಣದಲ್ಲಿ S-7 ಕೋಚ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಹೊಗೆ ಆವರಿಸಿತ್ತು. ಇದು ಗಮನಕ್ಕೆ ಬರುತ್ತಿದ್ದಂತೆ ಲೋಕೋ ಪೈಲೆಟ್ ರೈಲು ನಿಲ್ಲಿಸಿದ್ದಾರೆ. ತಕ್ಷಣವೇ ಪ್ರಯಾಣಿಕರನ್ನು ಕೋಚ್ ನಿಂದ ಸ್ಥಳಾಂತರಿಸಲಾಗಿದೆ.

ಅಗ್ನಿಶಾಮಕ ದಳ ಸಿಬ್ಬಂದಿ ಪರಿಶೀಲನೆ ನಡೆಸಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ಸದ್ಯ ಇದುವರೆಗೂ ಯಾವುದೇ ಗಾಯಗಳು ವರದಿಯಾಗಿಲ್ಲ. ಇನ್ನು ಈ ಘಟನೆಯಿಂದಾಗಿ ರೈಲು ಕೆಲ ಗಂಟೆಗಳ ಕಾಲ ವಿಳಂಬವಾಗಿದ್ದು ಪರಿಸ್ಥಿತಿ ಸಹಜ ಸ್ಥಿತಿಗೆ ಬರುತ್ತಿದ್ದಂತೆ ರೈಲು ಹೊರಟಿದೆ.

Click

https://newsnotout.com/2024/09/digital-upi-payment-innovation-by-auto-driver-kannada-news/
https://newsnotout.com/2024/09/mangaluru-panamburu-beach-kannada-news-nomore-issue/
See also  ಮಡಿಕೇರಿ: ರಾತ್ರೋರಾತ್ರಿ 15ರ ಬಾಲಕಿಯ ತಲೆ ಕಡಿದು ರುಂಡದೊಂದಿಗೆ ಆರೋಪಿ ಪರಾರಿ..! ದೇಹದ ಭಾಗಗಳಿಗಾಗಿ ಹುಡುಕಾಟ..!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget