ಬೆಂಗಳೂರು

ಯುವತಿಯ ಪ್ರಜ್ಞೆ ತಪ್ಪಿಸಿ ಗ್ಯಾಂಗ್ ರೇಪ್ ..! ಬೆಂಗಳೂರಿನಲ್ಲಿ ಮತ್ತೊಂದು ಆಘಾತಕಾರಿ ಘಟನೆ

129

ನ್ಯೂಸ್ ನಾಟೌಟ್ : ರಾಜಧಾನಿ ಬೆಂಗಳೂರಿನಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ.ಸಾಮಾನ್ಯವಾಗಿ ಬೆಂಗಳೂರಿನಲ್ಲಿ ರಾತ್ರಿ ಹನ್ನೆರಡು ಗಂಟೆಯಾದ್ರೂ ಕೂಡ ಜನ ಓಡಾಡಿಕೊಂಡೇ ಇರುತ್ತಾರೆ.ಮಹಿಳೆಯರು-ಪುರುಷರು ಸೇರಿದಂತೆ ರಸ್ತೆಯಲ್ಲಿ ಜನ ತುಂಬಿರುತ್ತಾರೆ.ಹೀಗಿರುವಾಗಲೇ ಖಾಸಗಿ ಕಂಪೆನಿಯೊಂದರ ಯುವತಿಯೊಬ್ಬಳು ತನ್ನ ಮೇಲೆ ಗ್ಯಾಂಗ್ ರೇಪ್ ಆಗಿದೆ ಎಂದು ದೂರು ನೀಡಿದ್ದಾಳೆ.ಪೊಲೀಸರಿಗೆ ನೀಡಿದ ದೂರಿನಲ್ಲಿ ಈಕೆ ತನ್ನ ಪ್ರಜ್ಞೆ ತಪ್ಪಿಸಿ ಗ್ಯಾಂಗ್‌ ರೇಪ್‌ (Physical Abuse) ಮಾಡಿದ್ದಾರೆಂದು ಹೇಳಿದ್ದಾಳೆ.

ಕಳೆದ ಡಿ.12ರ ರಾತ್ರಿ ಸಂತ್ರಸ್ತೆ ಕೋರಮಂಗಲದ ಪಬ್‌ವೊಂದಕ್ಕೆ ಹೋಗಿದ್ದಾಳೆ. ಬಳಿಕ ಆಕೆಗೆ ಪ್ರಜ್ಞೆ ಬಂದಾಗ ಆಡುಗೋಡಿಯ ದೇವೇಗೌಡ ಲೇಔಟ್ ಬಳಿ ಇದ್ದುದ್ದಾಗಿ ಹೇಳಿದ್ದಾಳೆ.ಹಾಗಾದರೆ ಆಕೆ ಅಲ್ಲಿಗೆ ಹೇಗೆ ಬಂದಿದ್ದಾಳೆ ಅನ್ನೋದು ಆಕೆಗೂ ತಿಳಿದಿಲ್ಲ. ಪ್ರಜ್ಞೆ ಬಂದಾಗ ಸ್ಥಳೀಯರ ನೆರವಿನೊಂದಿಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾಳೆ. ತನ್ನ ದೇಹದ ಮೇಲೆ ತರಚು ಗಾಯಗಳಾಗಿದ್ದು, ಗ್ಯಾಂಗ್ ರೇಪ್ ಆಗಿದೆ ಎಂಬ ಶಂಕೆ ಇದೆ ಎಂದು ದೂರು ನೀಡಿದ್ದಾಳೆ.

ಯುವತಿಯೊಬ್ಬಳ ಮೇಲೆ ಗ್ಯಾಂಗ್‌ ರೇಪ್‌ ನಡೆದಿದೆ ಎಂಬ ಆರೋಪ ಹಿನ್ನೆಲೆ ದೂರು ದಾಖಲಿಸಿಕೊಂಡಿರುವ ಕೋರಮಂಗಲ ಠಾಣೆ ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ. ಈಗಾಗಲೇ ಬೇಸಿಕ್ ಪ್ರೊಸೀಝರ್ ಮುಗಿಸಿದ್ದು, ಯುವತಿ ಹೇಳಿದ ಘಟನೆ ನಡೆದ ಸ್ಥಳದ ಸುಮಾರು 60 ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲನೆ ನಡೆಸಿದ್ದಾರೆ.

See also  ರೌಡಿಶೀಟರ್‌ ಹೆಸರಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಫ್ಯಾನ್ಸ್ ಪೇಜ್‌..! 60 ಅಕೌಂಟ್‌ ನಿಂದ 500ಕ್ಕೂ ಹೆಚ್ಚು ವಿಡಿಯೋ ಗಳನ್ನು ಡಿಲೀಟ್‌ ಮಾಡಿಸಿದ ಸಿಸಿಬಿ..! ಅಡ್ಮಿನ್‌ ಮೇಲೆ ಕೇಸ್ ದಾಖಲು..!
  Ad Widget   Ad Widget     Ad Widget   Ad Widget   Ad Widget   Ad Widget