Uncategorized

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಶಂಕಿತ ಉಗ್ರನ ಬಂಧನ..! ಸೌದಿಗೆ ಪರಾರಿಯಾಗುತ್ತಿದ್ದವ ಸೆರೆ ಸಿಕ್ಕಿದ್ದೇಗೆ..?

ನ್ಯೂಸ್‌ ನಾಟೌಟ್‌: ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರಾಷ್ಟ್ರೀಯ ತನಿಖಾ ದಳ ಅಧಿಕಾರಿಗಳು ಶಂಕಿತ ಉಗ್ರನನ್ನು ಬಂಧಿಸಿದ್ದಾರೆ. ಅಜೀಜ್ ಅಹ್ಮದ್ ಬಂಧಿತ ಶಂಕಿತ ಉಗ್ರ. ಹಿಜ್ಬ್ ಉಲ್ ತಹ್ರೀರ್ ಭಯೋತ್ಪಾದಕ ಸಂಘಟನೆಯ ಅಜೀಜ್​ ಅಹ್ಮದ್​ ಶುಕ್ರವಾರ(ಆ.30) ಬೆಳಗ್ಗೆ ಕೆಂಪೇಗೌಡ ವಿಮಾನ ನಿಲ್ದಾಣದ ಮೂಲಕ ಸೌದಿಯ ಜಿದ್ದಾಗೆ ಪಾರಾರಿಯಾಗುತ್ತಿದ್ದನು. ಈ ಮಾಹಿತಿಯನ್ನು ಇಮಿಗ್ರೇಷನ್ ಅಧಿಕಾರಿಗಳು ಎನ್​ಐಎಗೆ ನೀಡಿದ್ದಾರೆ. ಮಾಹಿತಿ ಆಧರಿಸಿ ಕೂಡಲೆ ಸ್ಥಳಕ್ಕೆ ತೆರಳಿದ ಎನ್ಐಎ ಅಧಿಕಾರಿಗಳು ಶಂಕಿತ ಉಗ್ರ ಅಜೀಜ್​ ಅಹ್ಮದ್​​ನನ್ನು ಬಂಧಿಸಿದ್ದಾರೆ.

ಇತ್ತೀಚಿಗೆ ಎನ್​ಐಎ ಅಧಿಕಾರಿಗಳು ನೌಕಾನೆಲೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಕಾರ್ಯ ನಿರ್ವಹಿಸುತ್ತಿದ್ದ ಮೂವರನ್ನು ವಶಕ್ಕೆ ಪಡೆದಿದ್ದರು. ಆರೋಪಿಗಳು ಹನಿಟ್ರ್ಯಾಪ್​​ಗೆ ಒಳಗಾಗಿ, ಹಣಕ್ಕಾಗಿ ಸೀಬರ್ಡ್ ನೌಕಾನೆಲೆ ಫೋಟೋ, ಇತರೆ ಮಾಹಿತಿಯನ್ನು ಶತ್ರು ರಾಷ್ಟ್ರ ಪಾಕಿಸ್ತಾನಕ್ಕೆ ನೀಡಿದ್ದರು. ಈ ಮಾಹಿತಿ ಆಧಾರದ ಮೇಲೆ ಎನ್​ಐಎ ಅಧಿಕಾರಿಗಳು ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು.

Click

https://newsnotout.com/2024/08/udupi-padukere-beach-kannada-news-police-stopped-her-and-localates-appreciates-police/
https://newsnotout.com/2024/08/helicopter-kedaranatha-kannada-news-video-viral-mandakini-river/
https://newsnotout.com/2024/08/pavitra-gowda-jail-kannada-news-darshan-thugudeepa-dogs-shift/
https://newsnotout.com/2024/08/real-estate-business-conflict-kannada-news-fire-viral/
https://newsnotout.com/2024/08/kodagu-private-bus-drivers-conflict-kannada-news-gonikoppa/

Related posts

BJP ಮುಖಂಡನ ಕೊಲೆ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್ ನಾಯಕ ಅರೆಸ್ಟ್​ ..! ಇಲ್ಲಿದೆ ಸಂಪೂರ್ಣ ಮಾಹಿತಿ

ಶಾಸಕ ಅಪ್ಪಚ್ಚು ರಂಜನ್ ಗೆ ಸಚಿವ ಸ್ಥಾನ ನೀಡಲು ಆಗ್ರಹ

2023-24ನೇ ಸಾಲಿನ SSLC ಮತ್ತು ದ್ವಿತೀಯ PUC ವಾರ್ಷಿಕ ಪರೀಕ್ಷೆ-1ರ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ, ಇಲ್ಲಿದೆ ಪೂರ್ಣ ಡಿಟೇಲ್ಸ್