ನ್ಯೂಸ್ ನಾಟೌಟ್: ಸುಳ್ಯದ ಬೇಂಗಮಲೆ ಎಂಬಲ್ಲಿ ವಿದ್ಯಾರ್ಥಿಗಳಿಬ್ಬರು ಪ್ರಯಾಣಿಸುತ್ತಿದ್ದ ಬೈಕ್ ವೊಂದು ಹಠಾತ್ ಪಂಕ್ಚರ್ ಆದ ಹಿನ್ನೆಲೆಯಲ್ಲಿ ಪಲ್ಟಿಯಾಗಿದೆ.
ಈ ಸಂದರ್ಭದಲ್ಲಿ ಬೈಕ್ ನಲ್ಲಿದ್ದ ವಿದ್ಯಾರ್ಥಿಗಳು ಕೆಳಕ್ಕೆ ಬಿದ್ದುದರಿಂದ ಮುಖ ಹಾಗೂ ಕೈಗೆ ಕ್ರಮವಾಗಿ ಗಾಯಗಳಾಗಿವೆ ಎಂದು ತಿಳಿದು ಬಂದಿದೆ. ಗಾಯಾಳುಗಳನ್ನು ಸ್ಥಳೀಯರು ಸುಳ್ಯದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ. ಇಬ್ಬರು ಕೂಡ ಸುಳ್ಯದ ಕಾಲೇಜೊಂದರ ವಿದ್ಯಾರ್ಥಿಗಳಾಗಿದ್ದಾರೆ.