ಕ್ರೈಂಬೆಂಗಳೂರು

ನಿರ್ಭಯ ಪ್ರಕರಣ ನೆನಪಿಸಿದ ಬೆಂಗಳೂರಿನ ಘಟನೆ! ಪಾರ್ಕ್‌ನಲ್ಲಿ ಕುಳಿತಿದ್ದ ಮಹಿಳೆಯನ್ನು ಕಾರಿನೊಳಗೆ ಎಳೆದೊಯ್ದು ಸಾಮೂಹಿಕ ಅತ್ಯಾಚಾರ!

381

ನ್ಯೂಸ್ ನಾಟೌಟ್: ತನ್ನ ಸ್ನೇಹಿತನೊಂದಿಗೆ ಉದ್ಯಾನವನದಲ್ಲಿ ಕುಳಿತಿದ್ದ ಯುವತಿಯನ್ನು ಬಲವಂತವಾಗಿ ಕಾರಿನೊಳಗೆ ಎಳೆದುಕೊಂಡು ಹೋಗಿ ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ಬೆಂಗಳೂರಿನಲ್ಲಿ ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ಕೋರಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರ ತಂಡವನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಸತೀಶ್, ವಿಜಯ್, ಶ್ರೀಧರ್ ಮತ್ತು ಕಿರಣ್ ಎಂದು ಗುರುತಿಸಲಾಗಿದೆ.

ಪೊಲೀಸರ ಪ್ರಕಾರ, ಮಾರ್ಚ್ 25 ರ ತಡರಾತ್ರಿ ಈ ಘಟನೆ ನಡೆದಿದೆ. ಯುವತಿ ತನ್ನ ಸ್ನೇಹಿತನೊಂದಿಗೆ ನ್ಯಾಷನಲ್ ಗೇಮ್ಸ್ ವಿಲೇಜ್ ಪಾರ್ಕ್‌ನಲ್ಲಿ ಕುಳಿತಿದ್ದಳು. ಆರೋಪಿಗಳು ಆಕೆಯ ಸ್ನೇಹಿತನನ್ನು ಬೆದರಿಸಿ ಆಕೆಯನ್ನು ಕಾರಿಗೆ ಎಳೆದೊಯ್ದಿದ್ದಾರೆ.

ಚಲಿಸುತ್ತಿದ್ದ ಕಾರಿನಲ್ಲಿ ತನ್ನ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಲಾಯಿತು ಎಂದು ಸಂತ್ರಸ್ತೆ ಪೊಲೀಸರಿಗೆ ದೂರು ನೀಡಿದ್ದು, ಆರೋಪಿಗಳು ಕಾರನ್ನು ದೊಮ್ಮಲೂರು, ಇಂದಿರಾನಗರ, ಆನೇಕಲ್ ಮತ್ತು ನೈಸ್ ರಸ್ತೆಗೆ ಓಡಿಸಿ ರಾತ್ರಿಯಿಡೀ ಕೃತ್ಯ ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಯು ಮಾರ್ಚ್ 26 ರಂದು ಮುಂಜಾನೆ ಆಕೆಯ ನಿವಾಸದ ಬಳಿ ಅವಳನ್ನು ಬಿಟ್ಟು ಹೋಗಿದ್ದಾರೆ. ಮುಂಜಾನೆ 4 ಗಂಟೆಗೆ ಮನೆಗೆ ತಲುಪಿದ ನಂತರ ಸಂತ್ರಸ್ತೆಯನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು ಮತ್ತು ನಂತರ ಪೊಲೀಸರಿಗೆ ದೂರು ನೀಡಲಾಯಿತು ಎಂದು ವರದಿ ತಿಳಿಸಿದೆ.

ಪೊಲೀಸರು ಇದೀಗ ನಾಲ್ವರು ಆರೋಪಿಗಳಾದ ಸತೀಶ್, ವಿಜಯ್, ಶ್ರೀಧರ್, ಕಿರಣ್ ಎಂಬುವವರನ್ನ ಬಂಧಿಸಿದ್ದಾರೆ.

See also  15 ದಿನಗಳಲ್ಲಿ 20 ಜನಕ್ಕೆ ಕಚ್ಚಿದ್ದ ಮೋಸ್ಟ್ ವಾಂಟೆಡ್ ಕೋತಿ ಸೆರೆ..! ಕೋತಿ ಹಿಡಿದು ಕೊಟ್ಟವರಿಗೆ ಘೋಷಣೆಯಾಗಿದ್ದ ಬಹುಮಾನದ ಮೊತ್ತವೆಷ್ಟು ಗೊತ್ತಾ?
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget