ಕರಾವಳಿಕ್ರೈಂಪುತ್ತೂರುವೈರಲ್ ನ್ಯೂಸ್

ಬೆಂಗಳೂರು ಕಂಬಳ ನೋಡಿ ಬರುತ್ತಿದ್ದ ವೇಳೆ ಭೀಕರ ಅಪಘಾತ..! ಸ್ಥಳದಲ್ಲೇ ಇಬ್ಬರ ದುರ್ಮರಣ, ಮೂವರ ಸ್ಥಿತಿ ಗಂಭೀರ! ಅಷ್ಟಕ್ಕೂ ಅಲ್ಲೇನಾಯ್ತು?

240

ನ್ಯೂಸ್ ನಾಟೌಟ್: ಬೆಂಗಳೂರಿನಲ್ಲಿ ನಡೆಯುತ್ತಿರುವ ಕಂಬಳವನ್ನು ವೀಕ್ಷಣೆಗೆಂದು ಹೋದವರು ವಾಪಸ್‌ ಮಂಗಳೂರಿಗೆ ಮರಳುವಾಗ ಬೋರ್ವೆಲ್ ಲಾರಿ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಕೊನೆಯುಸಿರೆಳೆದ ಘಟನೆ ನಡೆದಿದೆ.

ತುಮಕೂರು ಜಿಲ್ಲೆ ಕುಣಿಗಲ್‌ ತಾಲೂಕಿನ ಚಿಗಣಿಪಾಳ್ಯ ಬಳಿ ಈ ಭೀಕರ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಮೂವರಿಗೆ ಗಂಭೀರ ಗಾಯಗಳಾಗಿವೆ ಎಂದು ವರದಿ ತಿಳಿಸಿದೆ.

ಶನಿವಾರ (ನ.25) ರಾತ್ರಿ ಕಂಬಳ ನೋಡಿದ ಐವರು ಕಾರಿನಲ್ಲಿ ಮಂಗಳೂರಿಗೆ ವಾಪಸ್ ತೆರಳುತ್ತಿದ್ದರು. ಈ ವೇಳೆ ಬೋರ್‌ವೆಲ್‌ ಕೊರೆಯುವ ಲಾರಿ ಮತ್ತು ಕಾರು ಮುಖಾಮುಖಿ ಡಿಕ್ಕಿಯಾಗಿವೆ. ಘಟನೆಯಲ್ಲಿ ಮಂಗಳೂರಿನ ಪರೆರಾರ ಬಜಪ್ಪೆ ಗ್ರಾಮದ ನಿವಾಸಿ ಕಿಶಾನ್ ಶೆಟ್ಟಿ(20) ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಭಟ್ಟರ ತೋಟ ಗ್ರಾಮದ ನಿವಾಸಿ ಫಿಲಿಪ್ ನೇರಿ‌ (32) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಲಾರಿ ಡಿಕ್ಕಿ ಹೊಡೆದ‌ ರಭಸಕ್ಕೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಮೂವರನ್ನು ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವೈದ್ಯರು ತಿಳಿಸಿದ್ದಾರೆ. ಕಾರಿನಲ್ಲಿದ್ದ ಐವರು ಕಂಬಳವನ್ನು ವೀಕ್ಷಿಸಲೆಂದೇ ಮಂಗಳೂರಿನಿಂದ ಬೆಂಗಳೂರಿಗೆ ಬಂದಿದ್ದರಂತೆ. ಶನಿವಾರ ಕಂಬಳ ವೀಕ್ಷಿಸಿದ್ದ ಅವರು ಮಂಗಳೂರಿಗೆ ವಾಪಸ್ ತೆರಳುತ್ತಿದ್ದರು ಎಂದು ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ಕುಣಿಗಲ್ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಲಾರಿ ಹಾಗೂ ಲಾರಿ ಚಾಲಕನನ್ನು ಪೊಲೀಸರ ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿ ತಿಳಿಸಿದೆ.

See also  ಪೆರ್ಡೂರು ಮೇಳದಿಂದ ಭಾಗವತ ರಾಘವೇಂದ್ರ ಆಚಾರ್ಯ ಜನ್ಸಾಲೆ ನಿರ್ಗಮನ
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget