Latestಕ್ರೈಂವೈರಲ್ ನ್ಯೂಸ್

ಬೆಟ್ಟಿಂಗ್ ಆಪ್ ಅನ್ನು ಪ್ರಚಾರ ಮಾಡಿದ್ದಕ್ಕೆ ಸೋನು ಗೌಡ ಸೇರಿ 100ಕ್ಕೂ ಹೆಚ್ಚು ಮಂದಿಯ ವಿಚಾರಣೆ..! ಕ್ಷಮೆ ಕೇಳಿದ ರೀಲ್ಸ್ ಸ್ಟಾರ್‌ ಗಳು..!

726

ನ್ಯೂಸ್ ನಾಟೌಟ್: ಮಾನ್ಯತೆ ಪಡೆಯದ ಬೆಟ್ಟಿಂಗ್ ಆಪ್ ಬಗ್ಗೆ ಪ್ರಮೋಟ್ ಮಾಡಿದ ಆರೋಪದ ಮೇಲೆ ರೀಲ್ಸ್ ಸ್ಟಾರ್ ಸೋನು ಶ್ರೀನಿವಾಸ್‌ ಗೌಡ ಸೇರಿದಂತೆ 100ಕ್ಕೂ ಅಧಿಕ ರೀಲ್ಸ್ ಸ್ಟಾರ್‌ಗಳಿಗೆ ನೋಟಿಸ್ ನೀಡಿ ಸೈಬರ್ ಕ್ರೈಂ ಪೊಲೀಸರು ವಿಚಾರಣೆಗೊಳಪಡಿಸಿದ್ದಾರೆ.

ತಮ್ಮ ಇನ್ಸ್ಟಾಗ್ರಾಂ ಪೇಜ್‌ ಗಳಲ್ಲಿ ಐಪಿಎಲ್ ಬೆಟ್ಟಿಂಗ್ ಸಂಬಂಧ ಜಾಹೀರಾತು ಬಿತ್ತರಿಸಿದ್ದ ರೀಲ್ಸ್ ಸ್ಟಾರ್‌ ಗಳಿಗೆ ಶಾಕ್ ಎದುರಾಗಿದೆ. ತಮ್ಮ ಪೇಜ್‌ ಗಳಲ್ಲಿ ಬಿತ್ತರಿಸಿದ್ದ ಜಾಹೀರಾತುಗಳು ಜನರಿಗೆ ವಂಚಿಸುವ ಜಾಹೀರಾತುಗಳು ಆಗಿದ್ದವು. ಹಾಗಾಗಿ ವಕೀಲರೊಬ್ಬರು ಬೆಂಗಳೂರು ಸೈಬರ್ ಕ್ರೈಂ ಪೊಲೀಸರಿಗೆ ದೂರು ಕೊಟ್ಟಿದ್ದರು. ಸೋಶಿಯಲ್ ಮೀಡಿಯಾ ಪೇಜ್‌ ಗಳಲ್ಲಿ ಜನರಿಗೆ ವಂಚಿಸುವ ಜಾಹೀರಾತು ಪ್ರಕಟಿಸಿದ್ದ ರೀಲ್ಸ್ ಸ್ಟಾರ್‌ ಗಳ ಪಟ್ಟಿ ಮಾಡಿ ಸೈಬರ್ ಕ್ರೈಂ ಪೊಲೀಸರು ನೋಟಿಸ್ ನೀಡಿದ್ದರು.

ಸೋನು ಶ್ರೀನಿವಾಸ್‌ ಗೌಡ, ದೀಪಕ್‌ ಗೌಡ, ವರುಣ್ ಆರಾದ್ಯ, ದಚ್ಚು ಸೇರಿ ನೂರಕ್ಕು ಹೆಚ್ಚು ರೀಲ್ಸ್ ಸ್ಟಾರ್‌ ಗಳಿಗೆ ನೋಟಿಸ್ ಕೊಟ್ಟು ವಿಚಾರಣೆ ಮಾಡಿದ್ದಾರೆ. ವಿಚಾರಣೆಗೆ ಹಾಜರಾದವರು ಇನ್ನು ಮುಂದೆ ಇಂತಹ ಜಾಹೀರಾತುಗಳನ್ನ ನಾವು ಪ್ರಕಟಿಸುವುದಿಲ್ಲ.

ಈ ಜಾಹೀರಾತು ಪ್ರಕಟಿಸುವುದರಿಂದ ಜನರಿಗೆ ಸಮಸ್ಯೆ ಆಗುತ್ತದೆ ಎಂಬ ಅರಿವಿಲ್ಲದೇ ನಾವು ಪ್ರಕಟಿಸಿದ್ದೇವೆ. ನಾವು ಮಾಡಿದ್ದ ತಪ್ಪಿನ ಬಗ್ಗೆ ಅರಿವಿಗೆ ಬಂದಿದ್ದು, ಜಾಹೀರಾತುಗಳನ್ನ ಡಿಲೀಟ್ ಮಾಡಲಾಗಿದೆ ಎಂದು ಹೇಳಿಕೊಂಡಿದ್ದಾರೆ. ಜನರಿಗೆ ವಂಚಿಸುವ ಜಾಹೀರಾತುಗಳು ಇನ್ನೊಮ್ಮೆ ಪ್ರಕಟಿಸಿದರೆ ಜೈಲಿಗೆ ಕಳಿಸುವ ಎಚ್ಚರಿಕೆಯನ್ನು ಸೈಬರ್ ಕ್ರೈಂ ಪೊಲೀಸರು ನೀಡಿದ್ದಾರೆ ಎನ್ನಲಾಗಿದೆ.

 

See also  8 ಜನರೊಂದಿಗೆ ಮದುವೆಯಾಗಿದ್ದಾಳೆ ಎಂದು ಹೈಕೋರ್ಟ್ ಮೆಟ್ಟಿಲೇರಿದ ಪತಿ..! ಎಂಟಲ್ಲ ನಾಲ್ಕೇ ಎಂದ ಮಹಿಳೆ ಪರ ವಕೀಲೆ..!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget