ಜೀವನ ಶೈಲಿ/ಆರೋಗ್ಯಮಹಿಳೆ-ಆರೋಗ್ಯವೈರಲ್ ನ್ಯೂಸ್ಸಿನಿಮಾ

ಶಸ್ತ್ರಚಿಕಿತ್ಸೆಗಾಗಿ ಅಮೆರಿಕಕ್ಕೆ ತೆರಳಲಿರುವ ಶಿವರಾಜ್ ​ಕುಮಾರ್..! ಅಭಿಮಾನಿಗಳು ಫೋಟೋ ತೆಗೆದುಕೊಳ್ಳಲು ಬಂದಾಗ ಇನ್ ​ಫೆಕ್ಷನ್ ಆಗಬಾರದು ಎಂದು ದೂರ ನಿಲ್ಲಿಸಿದ್ದೇನೆ ಎಂದ ಶಿವಣ್ಣ..!

241

ನ್ಯೂಸ್ ನಾಟೌಟ್: ನಟ ಶಿವರಾಜ್ ​ಕುಮಾರ್ ಗೆ 60 ವರ್ಷ ಮೇಲಾಗಿದೆ. ಈಗಲೂ ಅವರು ಫಿಟ್ ಆಗಿದ್ದಾರೆ. ಸದ್ಯ ಅವರು ‘ಭೈರತಿ ರಣಗಲ್’ ಚಿತ್ರದ ಪ್ರಮೋಷನ್​ನಲ್ಲಿ ಬ್ಯುಸಿ ಇದ್ದಾರೆ. ತಮಗೆ ಅನಾರೋಗ್ಯ ಆಗಿರೋದು ಹೌದು ಎಂದಿರುವ ಶಿವರಾಜ್, ಶಸ್ತ್ರಚಿಕಿತ್ಸೆಗಾಗಿ ಅಮೆರಿಕ ತೆರಳೋದಾಗಿ ಹೇಳಿಕೆ ನೀಡಿದ್ದಾರೆ.
ಸಂದರ್ಶನವೊಂದರಲ್ಲಿ ಮಾತನಾಡಿದ ಶಿವಣ್ಣ, ಅನಾರೋಗ್ಯದ ಬಗ್ಗೆ ಹೇಳಿಕೊಂಡಿದ್ದಾರೆ. ‘ನನಗೆ ಅನಾರೋಗ್ಯ ಇದೆ. ನಾನು ಸುಳ್ಳು ಹೇಳಲ್ಲ. ನನೂ ಮನುಷ್ಯನೇ. ಟ್ರೀಟ್ ​ಮೆಂಟ್ ತೆಗೆದುಕೊಳ್ಳುತ್ತಿದ್ದೇನೆ’ ಎಂದಿದ್ದಾರೆ.

‘ಟ್ರೀಟ್ ​ಮೆಂಟ್ ​ಗೆ ನಾಲ್ಕು ಸೆಷನ್ ಇದೆ. ಈಗಾಗಲೇ ಎರಡು ಸೆಷನ್ ಆಗಿದೆ. ಇನ್ನೆರಡು ಸೆಷನ್ ಮಾಡಬೇಕಿದೆ. ಒಂದು ಸರ್ಜರಿ ನಡೆಯಬೇಕಿದೆ. ಅಮೆರಿಕದಲ್ಲಿ ಮಾಡೋದಾ ಅಥವಾ ಇಲ್ಲಿ ಮಾಡೋದಾ ಎನ್ನುವ ಬಗ್ಗೆ ಯೋಚನೆ ನಡೆಯುತ್ತಿದೆ. ಅಮೆರಿಕದಲ್ಲಿ ಮಾಡೋದು ಎಂದಾದರೆ ಒಂದು ತಿಂಗಳು ನಾನು ಅಲ್ಲಿಗೆ ಹೋಗಬೇಕಾಗುತ್ತದೆ.’ ಎಂದಿದ್ದಾರೆ.

ಅಭಿಮಾನಿಗಳು ಫೋಟೋ ತೆಗೆಸಿಕೊಳ್ಳೋಕೆ ಬಂದಾಗ ದೂರ ನಿಲ್ಲಿ ಎನ್ನುತ್ತೇನೆ. ಅವರಿಗೆ ಇನ್​ಫೆಕ್ಷನ್ ಆಗಬಾರದು ಎನ್ನುವ ಕಾರಣಕ್ಕೆ ಈ ರೀತಿ ಮಾಡಿದ್ದೇನೆ ಅಷ್ಟೇ. ಇದೆಲ್ಲ ಇನ್ನೆರಡು ತಿಂಗಳು ಅಷ್ಟೇ’ ಎಂದಿದ್ದಾರೆ.
ಶಿವರಾಜ್ ​ಕುಮಾರ್ ಯಾವ ರೀತಿಯ ತೊಂದರೆ ಎದುರಿಸುತ್ತಿದ್ದಾರೆ ಎಂಬುದನ್ನು ರಿವೀಲ್ ಮಾಡಿಲ್ಲ. ಆದರೆ, ಯಾವುದೋ ಗಂಭೀರ ಆರೋಗ್ಯ ಸಮಸ್ಯೆ ಎದುಸುತ್ತಿದ್ದಾರೆ ಎಂಬುದು ಸ್ಪಷ್ಟವಾಗಿದೆ.

Click

https://newsnotout.com/2024/11/vloger-in-bengaluru-road-kannada-news-10-year-old-boy-misbehaviour/
https://newsnotout.com/2024/11/3-children-and-father-got-nomore-kannada-news-thungabhadra/
https://newsnotout.com/2024/11/bengaluru-kannada-news-doctor-issue-with-patient-d/
https://newsnotout.com/2024/11/mangaluru-cow-theft-kannada-news-judicial-custody-kannada-news-ff/
See also  ಅಂತರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ಆರ್‌ ಅಶ್ವಿನ್‌..! ಭಾರತದ ಪರ ಟೆಸ್ಟ್‌ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ವಿಕೆಟ್‌ ಪಡೆದ ಎರಡನೇ ಬೌಲರ್‌ ಅಶ್ವಿನ್‌
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget