ದೇಶ-ವಿದೇಶರಾಜಕೀಯವೈರಲ್ ನ್ಯೂಸ್

ತಮ್ಮ ನಿವಾಸದಲ್ಲೆ ‘ಭಾರತ ರತ್ನ’ ಸ್ವೀಕರಿಸಿದ ಎಲ್‌.ಕೆ.ಅಡ್ವಾಣಿ, ಅಡ್ವಾಣಿ ಮನೆಗೆ ಬಂದ ಪ್ರಧಾನಿ ಮೋದಿ ಮತ್ತು ರಾಷ್ಟ್ರಪತಿ

239

ನ್ಯೂಸ್ ನಾಟೌಟ್: ರಾಷ್ಟ್ರಪತಿ ದ್ರೌಪದಿ ಮುರ್ಮು ಇಂದು(ಮಾ.31) ಹಿರಿಯ ರಾಜಕಾರಣಿ ಎಲ್‌.ಕೆ.ಅಡ್ವಾಣಿ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಗೌರವ ‘ಭಾರತ ರತ್ನ’ ಪ್ರಶಸ್ತಿಯನ್ನು ನಿವಾಸದಲ್ಲೇ ಪ್ರದಾನ ಮಾಡಿದರು.

ಮಾಜಿ ಪ್ರಧಾನಿಗಳಾದ ಚೌಧರಿ ಚರಣ್‌ ಸಿಂಗ್‌, ಪಿ.ವಿ. ನರಸಿಂಹ ರಾವ್‌, ಕೃಷಿ ವಿಜ್ಞಾನಿ ಎಂ.ಎಸ್‌. ಸ್ವಾಮಿನಾಥನ್‌ ಮತ್ತು ಬಿಹಾರದ ಮಾಜಿ ಮುಖ್ಯಮಂತ್ರಿ ಕರ್ಪೂರಿ ಠಾಕೂರ್‌ ಅವರಿಗೂ ಮರ* ಣೋತ್ತರವಾಗಿ ‘ಭಾರತ ರತ್ನ’ ಪ್ರಶಸ್ತಿಗಳನ್ನು ಶನಿವಾರ(ಮಾ.30) ಪ್ರದಾನ ಮಾಡಲಾಗಿತ್ತು.

ಅನಾರೋಗ್ಯದ ಕಾರಣ ನಿನ್ನೆ ನಡೆದ ಸಮಾರಂಭದಲ್ಲಿ ಭಾರತ ರತ್ನ ಪ್ರಶಸ್ತಿ ಸ್ವೀಕರಿಸಲು ಅಡ್ವಾಣಿ ಆಗಮಿಸಿರಲಿಲ್ಲ ಎಂದು ವರದಿಯಾಗಿತ್ತು. ಈ ವೇಳೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಉಪಸ್ಥಿತರಿದ್ದರು.

See also  Free Bus Effect: ಬಸ್ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಬುರ್ಖಾ ತೊಟ್ಟ ಪುರುಷ..! ಅಷ್ಟಕ್ಕೂ ಆತ ಹೊರಟದ್ದೆಲ್ಲಿಗೆ ಗೊತ್ತಾ..?
  Ad Widget   Ad Widget   Ad Widget     Ad Widget   Ad Widget   Ad Widget Ad Widget     Ad Widget   Ad Widget   Ad Widget