ಕ್ರೈಂರಾಜಕೀಯವೈರಲ್ ನ್ಯೂಸ್

ಭಾರತ್ ಜೋಡೋ ನ್ಯಾಯ ಯಾತ್ರೆ ವೇಳೆ ಬ್ಯಾನರ್ ಹರಿದು ಕಲ್ಲು ತೂರಾಟ..! ಇಲ್ಲಿದೆ ವೈರಲ್ ವಿಡಿಯೋ

256

ನ್ಯೂಸ್ ನಾಟೌಟ್ :ಭಾರತ್ ಜೋಡೋ ನ್ಯಾಯ ಯಾತ್ರೆ ಅಸ್ಸಾಂ ಮೂಲಕ ಹಾದುಹೋಗುತ್ತಿದ್ದಾಗ ದುಷ್ಕರ್ಮಿಗಳು ಯಾತ್ರೆಯ ಪೋಸ್ಟರ್ ಗಳು ಮತ್ತು ಬ್ಯಾನರ್ ಗಳನ್ನು ಹರಿದುಹಾಕಿದ ಘಟನೆ ಲಖಿಂಪುರ ಪಟ್ಟಣದಲ್ಲಿ ಶನಿವಾರ(ಜ.೨೦) ನಡೆದಿದೆ ಎಂಬ ಆರೋಪ ಕೇಳಿಬಂದಿದೆ.

ನಂತರ ಇಂದು ಯಾತ್ರೆ ನಡೆಯುವ ಸಂದರ್ಭದಲ್ಲಿ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿ ವಾಹನಗಳನ್ನು ಧ್ವಂಸಗೊಳಿಸಿದ್ದಾರೆ ಎಂದು ಕಾಂಗ್ರೆಸ್ ಶನಿವಾರ ಆರೋಪಿಸಿದೆ.

ಕಾಂಗ್ರೆಸ್ 54 ಸೆಕೆಂಡುಗಳ ವೀಡಿಯೊವನ್ನು ಬಿಡುಗಡೆ ಮಾಡಿದ್ದು, ಜನರು “ಜೈ ಶ್ರೀ ರಾಮ್” ಎಂದು ಘೋಷಣೆ ಕೂಗಿ ಪೋಸ್ಟರ್ ಗಳನ್ನು ಹರಿದುಹಾಕುವುದನ್ನು ಕಾಣಬಹುದು ಎಂದು ಬರೆದುಕೊಂಡಿದ್ದಾರೆ. ರಾಹುಲ್ ಗಾಂಧಿ ಮತ್ತು ಇತರ ಇಬ್ಬರು ಕಾಂಗ್ರೆಸ್ ನಾಯಕರ ಭಾವಚಿತ್ರವಿರುವ ಹೋರ್ಡಿಂಗ್ ಅನ್ನು ಇನ್ನೊಬ್ಬ ವ್ಯಕ್ತಿ ಕೆಳಗೆ ಎಳೆಯುತ್ತಿರುವುದನ್ನು ಈ ಕ್ಲಿಪ್ ನಲ್ಲಿ ತೋರಿಸಲಾಗಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅಸ್ಸಾಂ ಕಾಂಗ್ರೆಸ್ ಘಟಕ, “ರಾಹುಲ್ ಗಾಂಧಿ ಅವರ ಭಾರತ್ ಜೋಡೋ ನ್ಯಾಯ್ ಯಾತ್ರೆ ಅಸ್ಸಾಂನಲ್ಲಿ ಸಾವಿರಾರು ಜನರನ್ನು ಆಕರ್ಷಿಸಿದೆ. ಇದನ್ನು ಸಹಿಸಲಾಗದೇ ಪೋಸ್ಟರ್ಗಳು ಮತ್ತು ಬ್ಯಾನರ್ಗಳನ್ನು ಹರಿದುಹಾಕುತ್ತಿದ್ದಾರೆ” ಎಂದು ಹೇಳಿಕೊಂಡಿದೆ.

https://newsnotout.com/2024/01/muslim-hindu-news-d/
See also  ವಿಮಾನದಲ್ಲಿ ನೀರು ಕುಡಿದು ಅಸ್ವಸ್ಥರಾದ್ರಾ ಮಯಾಂಕ್‌ ಅಗರ್ವಾಲ್‌..? ಕ್ರಿಕೆಟಿಗ ಆಸ್ಪತ್ರೆಗೆ ದಾಖಲು
  Ad Widget     Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget