ಕರಾವಳಿಕ್ರೈಂ

ಮಂಗಳೂರು: ಬೈಕ್ ಸವಾರನಿಗೆ ದಿಢೀರ್ ಅಡ್ಡ ಬಂದ ಶ್ವಾನ..! ಡಿವೈಡರ್‌ಗೆ ಡಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

321

ನ್ಯೂಸ್‌ ನಾಟೌಟ್‌: ಬೈಕ್‌ನಲ್ಲಿ ಸಂಚರಿಸುತ್ತಿದ್ದಾಗ ರಸ್ತೆಯಲ್ಲಿ ನಾಯಿ ಅಡ್ಡ ಬಂದು ನಿಯಂತ್ರಣ ತಪ್ಪಿದ ಬೈಕ್‌ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು
ಸವಾರ ಮೃತಪಟ್ಟ ಘಟನೆ ಮಂಗಳೂರಿನ ಯೆಯ್ಯಾಡಿ ಸಮೀಪದ ಶರ್ಬತ್‌ ಕಟ್ಟೆ ಎಂಬಲ್ಲಿ ಸಂಭವಿಸಿದೆ.

ಮೃತ ಬೈಕ್‌ ಸವಾರನನ್ನು ಮರೋಳಿ ಬಜ್ಜೋಡಿ ನಿವಾಸಿ ನರಸಿಂಹ ಗಟ್ಟಿ (67) ಎಂದು ಗುರುತಿಸಲಾಗಿದೆ. ಮನೆಯಿಂದ ಯೆಯ್ಯಾಡಿ ಕಡೆಗೆ ಸ್ಕೂಟರಿನಲ್ಲಿ ತೆರಳುತ್ತಿದ್ದ ಸಂದರ್ಭ ನಾಯಿಯೊಂದು ಅಡ್ಡ ದಾಟಿದೆ. ನಿಯಂತ್ರಣ ತಪ್ಪಿ ಅವರ ಬೈಕ್‌ ನಾಯಿಗೆ ಡಿಕ್ಕಿ ಹೊಡೆದಿದೆ. ಆಗ ಅವರ ತಲೆ ಡಿವೈಡರ್‌ಗೆ ಬಡಿದು ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲು ಕರೆದುಕೊಂಡು ಹೋಗುತ್ತಿರುವಾಗ ದಾರಿ ಮಧ್ಯೆ ಮೃತಪಟ್ಟಿದ್ದಾರೆ. ಮೃತರು ಪತ್ನಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ ಎಂದು ತಿಳಿದು ಬಂದಿದೆ.

See also  ಚಾರ್ಮಾಡಿ ಘಾಟಿಯಲ್ಲಿ ಕಿ.ಮೀಗಟ್ಟಲೆ ಟ್ರಾಫಿಕ್‌ ಜಾಮ್‌..! ಕೆಟ್ಟು ನಿಂತ 16 ಚಕ್ರದ ಲಾರಿ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget