ಕರಾವಳಿಕ್ರೈಂಪುತ್ತೂರು

ಉಪ್ಪಿನಂಗಡಿ ವಿದ್ಯಾರ್ಥಿ ಚಲಾಯಿಸುತ್ತಿದ್ದ ಬೈಕ್ ಡಿಕ್ಕಿ ; ಪಾದಚಾರಿ ಸಾವು

264

ನ್ಯೂಸ್‌ ನಾಟೌಟ್‌ ಉಪ್ಪಿನಂಗಡಿ : ಪುತ್ತೂರಿನ ಕಾಲೇಜೊಂದರ ವಿದ್ಯಾರ್ಥಿ ಚಲಾಯಿಸುತ್ತಿದ್ದ ಬೈಕ್ ಡಿಕ್ಕಿಯಾಗಿ ಪಾದಚಾರಿಯೋರ್ವರು ಮೃತಪಟ್ಟ ಘಟನೆ ಉಪ್ಪಿನಂಗಡಿಯಲ್ಲಿ ಬುಧವಾರ (ಜೂ.22 ) ನಡೆದಿದೆ.

ಮೃತಪಟ್ಟವರನ್ನು ಇಳಂತಿಲದ ಪೆರ್ನಾಂಡೀಸ್ (64) ಎಂದು ಗುರುತಿಸಲಾಗಿದೆ. ಉಪ್ಪಿನಂಗಡಿ ಬೆಳ್ತಂಗಡಿ ರಸ್ತೆಯ ಎಚ್ಎಂ ಆಡಿಟೋರಿಯಂ ಸಮೀಪ ಅಪಘಾತ ಸಂಭವಿಸಿದೆ. ಪುತ್ತೂರಿನ ಕಾಲೇಜಿನ ವಿದ್ಯಾರ್ಥಿ ಬೆಳ್ತಂಗಡಿಯ ಉಳಿ ಗ್ರಾಮದ ನಿತಿನ್ ಕಾಲೇಜಿಗೆ ಬರುವಾಗ ಪಾದಚಾರಿ ಇಳಂತಿಲದ ಪೆರ್ನಾಂಡೀಸ್ ಎಂಬವರಿಗೆ ಬೈಕ್ ಡಿಕ್ಕಿಯಾಗಿದೆ.

ಡಿಕ್ಕಿಯ ರಭಸಕ್ಕೆ ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದ ಪೆರ್ನಾಂಡೀಸ್ ಮಂಗಳೂರಿನ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಸಣ್ಣ ಪುಟ್ಟ ಗಾಯಗೊಂಡ ನಿತಿನ್ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

https://www.youtube.com/watch?v=9JBkxfbjIeQ
See also  ದಕ್ಷಿಣ ಕನ್ನಡ ಗ್ರಾಮ ಪಂಚಾಯಿತಿಗಳಲ್ಲಿ ಬೃಹತ್ ಉದ್ಯೋಗಾವಕಾಶ
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget