ಕ್ರೈಂ

ಬೈಕ್ ಅಪಘಾತ, ಚಿಕಿತ್ಸೆ ಫಲಕಾರಿಯಾಗದೆ ಮಹಿಳೆ ಸಾವು

16

ಸುಳ್ಯ: ನೆಲ್ಯಾಡಿ ಕೊಲ್ಯೊಟ್ಟು ಅಂಗನವಾಡಿ ಕೇಂದ್ರದ ಬಳಿ ಡಿ.15ರಂದು ಬೆಳಿಗ್ಗೆ ಬೈಕ್ ಪಲ್ಟಿಯಾಗಿ ಗಂಭೀರ ಗಾಯಗೊಂಡಿದ್ದ ಮಹಿಳೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಮಹಿಳೆಯ ಪತಿ ಹಾಗೂ ಇಬ್ಬರು ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಪೆರಾಬೆ ಗ್ರಾಮದ ಅತ್ರಿಮಜಲು ನಿವಾಸಿ ದಿನೇಶ್ ಎಂಬವರ ಪತ್ನಿ ಗೀತಾ (30) ಮೃತಪಟ್ಟವರು. ದಿನೇಶ್​, ಗೀತಾ ಹಾಗೂ ಅವರ ಇಬ್ಬರು ಮಕ್ಕಳು ಡಿ.15ರಂದು ಬೆಳಗ್ಗೆ ಬೈಕ್​ನಲ್ಲಿ ಆಲಂಕಾರು-ನೆಲ್ಯಾಡಿ ಮಾರ್ಗವಾಗಿ ಸೌತಡ್ಕ ದೇವಸ್ಥಾನಕ್ಕೆ ಹೋಗುತ್ತಿದ್ದರು. ಈ ವೇಳೆ ನೆಲ್ಯಾಡಿ ಗ್ರಾಮದ ಕೊಂತ್ರಿಜಾಲು ಕೊಲ್ಯೊಟ್ಟು ಅಂಗನವಾಡಿ ಕೇಂದ್ರದ ಬಳಿ ಬೈಕ್​ ಪಲ್ಟಿಯಾಗಿದೆ. ಪರಿಣಾಮ ದ್ವಿಚಕ್ರ ವಾಹನದ ಹಿಂಬದಿ ಕುಳಿತಿದ್ದ ಗೀತಾ ಗಂಭೀರವಾಗಿ ಗಾಯಗೊಂಡಿದ್ದರು.