ಕ್ರೈಂಬೆಂಗಳೂರು

ತ್ರಿಬಲ್ ರೈಡ್ ಬಂದವರಿಗೆ ಯಮ ಸ್ವರೂಪಿಯಾಯ್ತು ಕೆಟ್ಟು ನಿಂತ ಕಾರು! ಮಾರ್ಗ ಮಧ್ಯ ಬಿದ್ದವರ ಮೇಲೆ ಹರಿಯಿತು ಮತ್ತೊಂದು ಕಾರು! ಮುಂದೇನಾಯ್ತು..?

 ನ್ಯೂಸ್‌ ನಾಟೌಟ್‌:  ಬೆಂಗಳೂರು-ಮೈಸೂರು ಎಕ್ಸ್​​​ಪ್ರೆಸ್ ಹೈವೆಯಲ್ಲಿ ರಾಮನಗರ ತಾಲೂಕಿನ ಜಯಪುರ ಗೇಟ್ ಬಳಿ ನಡೆದ ದುರಂತದಲ್ಲಿ ಮೂವರು ಸ್ಥಳದಲ್ಲೇ ಪ್ರಾಣಬಿಟ್ಟ ಘಟನೆ ಸೋಮವಾರ ನಡೆದಿದೆ.

ಬೆಂಗಳೂರಿನಿಂದ ಮೈಸೂರಿಗೆ ಮೂವರು ಒಂದು ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ಹಿಂಬದಿಯಿಂದ ಕಾರಿಗೆ ಡಿಕ್ಕಿ ಹೊಡೆದು ನೆಲಕ್ಕೆ ಅಪ್ಪಳಿಸಿದ್ದಾರೆ. ಈ ವೇಳೆ ಮತ್ತೊಂದು ಕಾರು ಬಂದು ಅವರಿಗೆ ಡಿಕ್ಕಿ ಹೊಡೆದು ಈ ದುರ್ಘಟನೆ ನಡೆದಿದೆ ಎಂದು ವರದಿ ತಿಳಿಸಿದೆ.

ಒಂದೇ ಬೈಕ್​ನಲ್ಲಿ ಬೆಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದ ಮೂವರು ಮುಂಭಾಗದಲ್ಲಿ ಕೆಟ್ಟು ನಿಂತಿದ್ದ ಕಾರಿಗೆ ಡಿಕ್ಕಿ ಹೊಡೆದಿದ್ದಾರೆ. ಡಿಕ್ಕಿಯ ರಭಸಕ್ಕೆ ಬೈಕ್​ನಲ್ಲಿದ್ದ ಮೂವರು ಹೆದ್ದಾರಿಗೆ ಬಿದ್ದಿದ್ದಾರೆ. ಇದೇ ವೇಳೆ ಹಿಂಬದಿಯಿಂದ ಬಂದ ಮತ್ತೊಂದು ಕಾರು ಇವರ ಮೇಲೆ ಹರಿದಿದೆ ಹೆದ್ದಾರಿಗೆ ಬಿದ್ದ ಮೂವರು ಅಲ್ಲೇ ಕೊನೆಯುಸಿರೆಳೆದಿದ್ದಾರೆ. ಸ್ಥಳಕ್ಕೆ ಆಗಮಿಸಿದ ರಾಮನಗರ ಸಂಚಾರಿ ಠಾಣಾ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Related posts

ಮಕ್ಕಳಿಬ್ಬರನ್ನು ಕೊಲೆ ಮಾಡಿದ ಕ್ರೂರಿ ತಾಯಿ..! ಏನಿದು ಅಮಾನವೀಯ ಘಟನೆ..?

ಲೈಂಗಿಕ ಕಿರುಕುಳ ಆರೋಪ: ಹೆಸರಾಂತ ನೃತ್ಯ ಸಂಯೋಜಕ ಜಾನಿ ಮಾಸ್ಟರ್ ಗೆ ಘೋಷಣೆಯಾಗಿದ್ದ ರಾಷ್ಟ್ರೀಯ ಪ್ರಶಸ್ತಿಯನ್ನು ರದ್ದುಗೊಳಿಸಿದ ಸಚಿವಾಲಯ..! ಇಲ್ಲಿದೆ ಸಂಪೂರ್ಣ ಮಾಹಿತಿ

ಕಾರ್ -ಬೈಕ್ ಅಪಘಾತ: ಬೈಕ್ ಸವಾರನಿಗೆ ಗಂಭೀರ ಗಾಯ