ನ್ಯೂಸ್ ನಾಟೌಟ್: ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ತಿಂಥಣಿ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಇಡೀ ಕುಟುಂಬವೇ ಸಾವನ್ನಪ್ಪಿದ ಘಟನೆ ಇಂದು(ಫೆ.05) ನಡೆದಿದೆ.
ಬೈಕ್ ಗೆ ಸಾರಿಗೆ ಬಸ್ ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದಾರೆ. ಇನ್ನು ಗಂಭೀರವಾಗಿ ಗಾಯಗೊಂಡಿದ್ದ ಇನ್ನಿಬ್ಬರು ಆಸ್ಪತ್ರೆಗೆ ಸಾಗಿರುವ ಮಾರ್ಗ ಮಧ್ಯದಲ್ಲೇ ಕೊನೆಯುಸಿರೆಳೆದಿದ್ದಾರೆ.
ಇದರೊಂದಿಗೆ ಸಾವಿನ ಸಂಖ್ಯೆ ಐದಕ್ಕೆ ಏರಿಕೆಯಾಗಿದ್ದು, ಇಡೀ ಕುಟುಂಬವೇ ಬಲಿಯಾಗಿದೆ ಎಂದು ವರದಿ ತಿಳಿಸಿದೆ. ಒಂದು ವರ್ಷದ ಮಗು ಹನುಮಂತ(1), ಹನುಮಂತ ತಂದೆ ಆಂಜನೇಯ (35) ತಾಯಿ ಗಂಗಮ್ಮ (28), ಹನುಮಂತನ ಸಹೋದರನ ಮಕ್ಕಳಾದ ಪವಿತ್ರ (5) ಹಾಗೂ ರಾಯಪ್ಪ (3) ಸಾವನ್ನಪ್ಪಿದವರು ಎಂದು ಗುರುತಿಸಲಾಗಿದೆ.
ಮೂವರು ಮಕ್ಕಳು ಸೇರಿ ಒಂದೇ ಬೈಕ್ ನಲ್ಲಿ 5 ಜನ ಸುರಪುರದಿಂದ ತಿಂಥಣಿ ಕಡೆಗೆ ಹೊರಟ್ಟಿದ್ದರು. ಆ ವೇಳೆ ಹಿಂಬದಿಯಿಂದ KA 32 F 2684 ನಂಬರಿನ ksrtc ಬಸ್ ಬಂದು ರಭಸವಾಗಿ ಗುದ್ದಿದೆ. ಘಟನೆಯಲ್ಲಿ ಇಡೀ ಕುಟುಂಬವೇ ಬಲಿಯಾಗಿದೆ.