ಕರಾವಳಿಕ್ರೈಂವಿಡಿಯೋ

ಬೈಕ್ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ , ವಿದ್ಯಾರ್ಥಿ ಸಾವು..! ಸಿಸಿಟಿವಿ ದೃಶ್ಯ ಇಲ್ಲಿದೆ

105

ನ್ಯೂಸ್‌ ನಾಟೌಟ್‌: ಬೈಕ್ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದು, ಗಂಭೀರ ಗಾಯಗೊಂಡ ಯುವಕ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದ ಘಟನೆ ಗುರುವಾರ ನ.23 ರಂದು ನಡೆದಿದೆ.

ಬೆಳ್ತಂಗಡಿಯ ಉಜಿರೆ ರಸ್ತೆಯಲ್ಲಿ ಘಟನೆ ನಡೆದಿದ್ದು, ಧರ್ಮಸ್ಥಳ ಗ್ರಾಮದ ನೇತ್ರಾವತಿ ನಿವಾಸಿ ದೀಕ್ಷಿತ್ ಸಾವಿಗೀಡಾದ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ.
ಡಿಕ್ಕಿಯ ಭಯಾನಕ ದೃಶ್ಯ ಸಿಸಿ ಟಿವಿ(cctv)ಯಲ್ಲಿ ಸೆರೆಯಾಗಿದ್ದು, ಕಾಲೇಜಿನಲ್ಲಿ ಮಧ್ಯಾಹ್ನ ಊಟ ಮುಗಿಸಿ ವಾಪಾಸು ಬರುವಾಗ ದುರ್ಘಟನೆ ಸಂಭವಿಸಿದೆ ಎಂದು ವರದಿ ತಿಳಿಸಿದೆ. ದೀಕ್ಷಿತ್ ಉಜಿರೆ ಎಸ್‌ಡಿಎಂ ಕಾಲೇಜಿನ ವಿದ್ಯಾರ್ಥಿ ಎಂಬ ಮಾಹಿತಿ ಲಭಿಸಿದೆ.

ಬೈಕ್ ಸ್ಟ್ಯಾಂಡ್ ತೆಗೆಯದೇ ಬೈಕ್ ಚಲಾಯಿಸಿದ ಕಾರಣ ಈ ದುರಂತ ಸಂಭವಿಸಿದೆ ಎನ್ನಲಾಗಿದೆ. ಗಂಭೀರ ಗಾಯಗೊಂಡು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ.

See also  ಸುಳ್ಯ ಕಾಯರ್ತೋಡಿ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ,ಜಾತ್ರೋತ್ಸವ ಸಂಭ್ರಮ:ಮೆರವಣಿಗೆ-ಹಸಿರುವಾಣಿ ಸಮರ್ಪಣೆ
  Ad Widget   Ad Widget   Ad Widget   Ad Widget   Ad Widget   Ad Widget