ನ್ಯೂಸ್ ನಾಟೌಟ್: ಸುಳ್ಯದ ಜ್ಯೋತಿ ಸರ್ಕಲ್ ಬಳಿ ಬೈಕ್ -ಸ್ಕೂಟಿ ನಡುವೆ ಡಿಕ್ಕಿ ಸಂಭವಿಸಿದೆ. ಬೈಕ್ ಸುಳ್ಯ ಕಡೆಯಿಂದ ಪುತ್ತೂರು ಕಡೆಗೆ ತೆರಳುತ್ತಿತ್ತು. ಹಾಗೂ ಸ್ಕೂಟಿ ಪುತ್ತೂರು ಕಡೆಯಿಂದ ಸುಳ್ಯಕ್ಕೆ ಬರುತ್ತಿತ್ತು ಎಂದು ತಿಳಿದು ಬಂದಿದೆ. ಡಿಕ್ಕಿಯ ರಭಸಕ್ಕೆ ಬೈಕ್ ನಿಂತಿದ್ದ ಸಿಮೆಂಟ್ ಲಾರಿಯೊಂದರ ಅಡಿಗೆ ಬಿದ್ದಿದೆ. ಸವಾರರಿಗೆ ಅಲ್ಪ ಪ್ರಮಾಣದ ಗಾಯಗಳಾಗಿವೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.