ಕ್ರೈಂ

ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಇದ್ದ ಹೆಲಿಕಾಪ್ಟರ್ ಪತನ: ಘಟನಾ ಸ್ಥಳದಲ್ಲಿ 4 ಮೃತದೇಹ ಪತ್ತೆ

832

ಚೆನ್ನೈ: ಸೇನಾಪಡೆಗಳ ಮುಖ್ಯಸ್ಥ (ಸಿಡಿಎಸ್) ಬಿಪಿನ್ ರಾವತ್ ಅವರು ಪ್ರಯಾಣಿಸುತ್ತಿದ್ದ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್ ಪತನಗೊಂಡ ತಮಿಳುನಾಡಿನ ನೀಲಗಿರಿ ಅರಣ್ಯದ ವ್ಯಾಪ್ತಿಯ (ಕೂನೂರು ಬಳಿ) ಘಟನಾ ಸ್ಥಳದಲ್ಲಿ ನಾಲ್ಕು ಮೃತದೇಹಗಳು ಪತ್ತೆಯಾಗಿವೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ.

ಗಂಭೀರವಾಗಿ ಗಾಯಗೊಂಡು ಪತ್ತೆಯಾಗಿರುವ ಮೂವರನ್ನು ನೀಲಗಿರೀಸ್ ನ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ರಕ್ಷಣೆ ಮಾಡಿದವರಲ್ಲಿ ಬಿಪಿನ್ ರಾವತ್ ಕೂಡ ಒಬ್ಬರಾಗಿದ್ದು ಅವರನ್ನು ಆಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ ಸಾಗಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪ್ರಾಥಮಿಕ ಮೂಲಗಳು ತಿಳಿಸಿವೆ. ಘಟನೆ ನಡೆದ ಸ್ಥಳ ವೆಲ್ಲಿಂಗ್ ಟನ್ ನಿಂದ ಏಳು ಕಿಮೀ ಪರ್ವತ ಪ್ರದೇಶದಲ್ಲಿದೆ ಎಂದು ತಿಳಿದು ಬಂದಿದೆ. ಹೆಲಿಕಾಪ್ಟರ್ ಕೂನೂರಿನಿಂದ ಕೊಯಮತ್ತೂರು ಸೇನಾ ಕಾರ್ಯಕ್ರಮಕ್ಕೆ ಬಿಪಿನ್ ರಾವತ್ ಹಾಗೂ ಅವರ ಪತ್ನಿ ಮಧುಲಿಕಾ ಮತ್ತು ಇತರ 12 ಜನರನ್ನು (ಸೇನಾಧಿಕಾರಿಗಳೂ ಒಳಗೊಂಡಂತೆ) ಹೊತ್ತು ತೆರಳುತ್ತಿತ್ತು. ತುರ್ತು ರಕ್ಷಣಾ ಪಡೆಗಳು ಸ್ಥಳದಲ್ಲಿ ತೀವ್ರ ಪರಿಹಾರ ಕಾರ್ಯಾಚರಣೆ ಕೈಗೊಂಡಿದ್ದು ಬುಧವಾರ ಮಧ್ಯಾಹ್ನ ಸೇನಾ ಹೆಲಿಕಾಪ್ಟರ್‌ ಪತನಗೊಂಡಿರುವುದಾಗಿ ಐಎಎಫ್ ತಿಳಿಸಿತ್ತು.

See also  ಮದುವೆಯಾಗುವಂತೆ ವಿವಾಹಿತ ಮಹಿಳೆಯನ್ನು ಪೀಡಿಸಿದ್ದ ಯುವಕ..! ಆಕೆಯ ಮನೆಗೆ ಬೆಂಕಿ ಹಚ್ಚಿದ್ದೇಕೆ ಪಾಗಲ್ ಪ್ರೇಮಿ..?
Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget