ಕರಾವಳಿಕ್ರೈಂವೈರಲ್ ನ್ಯೂಸ್

ಬಿಜೆಪಿ ಮುಖಂಡನ ಮನೆಯಲ್ಲಿ ಮಿಲಿಟರಿ ಮದ್ಯ ಪತ್ತೆ..! ಲಕ್ಷಾಂತರ ರೂಪಾಯಿ ಮಧ್ಯ ವಶಕ್ಕೆ ಪಡೆದ ಅಬಕಾರಿ ಅಧಿಕಾರಿಗಳು

279

ನ್ಯೂಸ್ ನಾಟೌಟ್: ಉಡುಪಿ ಜಿಲ್ಲೆ ಬಿಜೆಪಿ ಯುವ ಮೋರ್ಚಾ ಮುಖಂಡನೊಬ್ಬರ ಮನೆಯ ಮೇಲೆ ಜಿಲ್ಲಾ ಅಬಕಾರಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ ಓರ್ವನನ್ನು ಬಂಧಿಸಿ ಲಕ್ಷಾಂತರ ಮೌಲ್ಯದ ಡಿಫೆನ್ಸ್ (ಮಿಲಿಟರಿ) ಮದ್ಯಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ.

ಲೋಕಸಭಾ ಚುನಾವಣೆ ಪ್ರಯುಕ್ತ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಅಬಕಾರಿ ಜಂಟಿ ಆಯುಕ್ತರು, ಮಂಗಳೂರು ವಿಭಾಗ ಹಾಗೂ ಅಬಕಾರಿ ಉಪ ಆಯುಕ್ತರು ಉಡುಪಿ ಜಿಲ್ಲೆ ಇವರುಗಳು ಮಾರ್ಗದರ್ಶನದಂತೆ ಖಚಿತ ಮಾಹಿತಿ ಮೇರೆಗೆ ಏಪ್ರಿಲ್‌ 8ರಂದು ರಾತ್ರಿ ಉಡುಪಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ಬ್ರಹ್ಮಾವರ ಇಂದಿರಾನಗರದಲ್ಲಿರುವ ರಮೇಶ ಪ್ರಭು ಎಂಬವರ ಮನೆ ಮೇಲೆ ಈ ಅಬಕಾರಿ ದಾಳಿ ನಡೆದಿದೆ.

ರಮೇಶ್ ಪ್ರಭು ಪುತ್ರ ಅರ್ಜುನ್ ಪ್ರಭು ಬಿಜೆಪಿ ಉಡುಪಿ ಜಿಲ್ಲಾ ಯುವ ಮೋರ್ಚಾದ ಮುಖಂಡ ಎಂದು ತಿಳಿದು ಬಂದಿದೆ. ಮನೆಯಲ್ಲಿ ಅಕ್ರಮವಾಗಿ ಮದ್ಯ ದಾಸ್ತಾನು ಮಾಡಿರುವ ಖಚಿತ ಮಾಹಿತಿ ಮೇರೆಗೆ ಅಬಕಾರಿ ದಾಳಿ ನಡೆಸಿದಾಗ ಒಟ್ಟು 33.500 ಲೀಟರ್ ಡಿಫೆನ್ಸ್ ಮದ್ಯ ಪತ್ತೆಯಾಗಿದ್ದು, ಇದರ ಒಟ್ಟು ಮೌಲ್ಯ 1,55,000 ರೂಪಾಯಿ ಎಂದು ಅಂದಾಜಿಸಲಾಗಿದೆ. ಪ್ರಕರಣ ಸಂಬಂಧ ರಮೇಶ್ ಪ್ರಭುವನ್ನು ಬಂಧಿಸಲಾಗಿದೆ. ಈ ಬಗ್ಗೆ ಉಡುಪಿ ಉಪವಿಭಾಗದ ಅಬಕಾರಿ ಉಪನಿರೀಕ್ಷಕಿ ಮಧುರಾ ಎನ್.ದಾಸ್ ಮೊಕದ್ದಮೆಯನ್ನು ದಾಖಲಿಸಿಕೊಂಡು ಮುಂದಿನ ಕ್ರಮ ಜರುಗಿಸಿದ್ದಾರೆ ಎನ್ನಲಾಗಿದೆ.

See also  ಕಡಬ: ಬೈಕ್ -ಬಸ್ ನಡುವೆ ಅಪಘಾತ, ಬೈಕ್ ಸವಾರನಿಗೆ ಗಾಯ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget