ಕರಾವಳಿಕ್ರೈಂವೈರಲ್ ನ್ಯೂಸ್

ಬಂಟ್ವಾಳ ಬಿಜೆಪಿ ಶಾಸಕರಿಗೆ ಕಾರು ಡಿಕ್ಕಿ..! ರಾಜೇಶ್ ನಾಯ್ಕ್ ಆಸ್ಪತ್ರೆಗೆ ದಾಖಲು..!

251

ನ್ಯೂಸ್ ನಾಟೌಟ್‌: ಬಂಟ್ವಾಳ ಬಿಜೆಪಿ ಶಾಸಕರಿಗೆ ಕಾರೊಂದು ಡಿಕ್ಕಿಯಾಗಿ ಪರಾರಿಯಾದ ಘಟನೆ ದ.ಕ ಜಿಲ್ಲೆಯ ಮಂಗಳೂರು ತಾಲೂಕಿನ ತೆಂಕ ಎಡಪದವು ಎಂಬಲ್ಲಿ ನಡೆದಿದೆ.

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಗೆ ಭಾನುವಾರ ಕಾರು ಡಿಕ್ಕಿ ಹೊಡೆದಿರುವುದಾಗಿ ವರದಿ ತಿಳಿಸಿದೆ.
ಶಾಸಕ ರಾಜೇಶ್ ನಾಯ್ಕ್ ಎಡಪದವು ಗೋಪಾಲಕೃಷ್ಣ ದೇವಸ್ಥಾನಕ್ಕೆ ತೆರಳಿ ಇಂದು(ಜ.14) ಸಂಕ್ರಮಣದ ಅಂಗವಾಗಿ ಪೂಜೆ ಮುಗಿಸಿ ಕಾರಿನತ್ತ ನಡೆದುಕೊಂಡು ಬರುವಾಗ ಘಟನೆ ನಡೆದಿದೆ.

ಮೂಡುಬಿದಿರೆ ಕಡೆಯಿಂದ ಬರುತ್ತಿದ್ದ ಸ್ವಿಫ್ಟ್ ಕಾರು ಶಾಸಕರಿಗೆ ಡಿಕ್ಕಿಯಾಗಿದ್ದು, ಕಾರು ಗುದ್ದಿದ ರಭಸಕ್ಕೆ ಶಾಸಕ ರಾಜೇಶ್ ನಾಯ್ಕ್ ಗೆ ಬಿದ್ದು ಗಾಯಗಳಾಗಿವೆ.
ಕೂಡಲೇ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅದೃಷ್ಟವಶಾತ್ ಯಾವುದೇ ಅಪಾಯವಿಲ್ಲದೇ ಶಾಸಕರು ಪಾರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸದ್ಯ ಚಿಕಿತ್ಸೆ ಪಡೆದುಕೊಂಡ ಶಾಸಕ ರಾಜೇಶ್ ನಾಯ್ಕ್ ಮನೆಗೆ ವಾಪಾಸಾಗಿದ್ದು, ಡಿಕ್ಕಿ ಹೊಡೆದು ಪರಾರಿಯಾದ ಕಾರನ್ನು ಸ್ಥಳೀಯರು ಗುರುಪುರದಲ್ಲಿ ಹಿಡಿದು ಬಜ್ಪೆ ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ವರದಿ ತಿಳಿಸಿದೆ. ಕಾರು ಚಾಲಕನನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.

See also  ಪಿಯುಸಿ ಫಲಿತಾಂಶ : ಬೆಳ್ಳಾರೆಯ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯ ವಾಣಿಜ್ಯ ವಿಭಾಗದಲ್ಲಿ ಶೇ.100 ಫಲಿತಾಂಶ, ಇಲ್ಲಿದೆ ಸಂಪೂರ್ಣ ವಿವರ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget