ಕ್ರೈಂಬೆಂಗಳೂರುರಾಜಕೀಯವೈರಲ್ ನ್ಯೂಸ್

ಕೈ ಕಾಲು ಕತ್ತರಿಸಿ ಬಿಜೆಪಿ ಕಾರ್ಯಕರ್ತೆಯ ಹತ್ಯೆ..! ಡ್ರಮ್‌ ನೊಳಗಿದ್ದ ಮೃತದೇಹ ಸಿಕ್ಕಿದ್ದೇಗೆ..?

178

ನ್ಯೂಸ್ ನಾಟೌಟ್: ವೃದ್ಧೆಯೊಬ್ಬರ ಕೈ, ಕಾಲು ಕತ್ತರಿಸಿ ಭೀಕರವಾಗಿ ಕೊಂದು ಬಳಿಕ ಡ್ರಮ್‌ ನಲ್ಲಿ ಮೃತದೇಹವನ್ನು ತುಂಬಿ ಬೀದಿಗೆ ಬಿಸಾಡಿ ಮೃತರ ಪರಿಚಿತರೇ ಪರಾರಿ ಆಗಿರುವ ಘಟನೆ ಕೆ.ಆರ್‌.ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕೆ.ಆರ್‌.ಪುರ ಸಮೀಪದ ನಿಸರ್ಗ ಲೇಔಟ್‌ ನಿವಾಸಿ ಸುಶೀಲಮ್ಮ (76) ಕೊಲೆಯಾದ ದುರ್ದೈವಿ. ಈ ಹತ್ಯೆ ಸಂಬಂಧ ಮೃತಳ ಪರಿಚಿತ ದಿನೇಶ್ ಹಾಗೂ ಆತನ ಸಹಚರರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ.

ಬಿಜೆಪಿಯಲ್ಲಿ ಸಕ್ರಿಯ ಕಾರ್ಯಕರ್ತೆಯಾಗಿದ್ದ ಸುಶೀಲಮ್ಮ , ಸ್ಥಳೀಯ ಶಾಸಕ ಹಾಗೂ ಮಾಜಿ ಸಚಿವ ಬೈರತಿ ಬಸವರಾಜ್ ಪರವಾಗಿ ಚುನಾವಣಾ ಪ್ರಚಾರ ನಡೆಸಿದ್ದರು. ಆಗ ಅವರಿಗೆ ದಿನೇಶ್ ಎಂಬಾತನ ಪರಿಚಯವಾಗಿದ್ದು, ಆಗಾಗ್ಗೆ ಅಜ್ಜಿಗೆ ಮನೆಗೆ ಬಂದು ಹೋಗುವುದನ್ನು ಆತ ಮಾಡುತ್ತಿದ್ದ ಎಂದು ಮೂಲಗಳು ಹೇಳಿವೆ. ನಿಸರ್ಗ ಲೇಔಟ್‌ನ ಮನೆಗಳ ಓಣಿಯಲ್ಲಿ ಎರಡು ದಿನಗಳಿಂದ ಅನಾಥವಾಗಿ 10 ಲೀಟರ್‌ ಸಾಮರ್ಥ್ಯದ ಡ್ರಮ್‌ ಇಟ್ಟಿರುವುದನ್ನು ಭಾನುವಾರ ಗಮನಿಸಿದ ಸ್ಥಳೀಯರು, ಶಂಕೆ ಮೇರೆಗೆ ಆ ಡ್ರಮ್‌ ಅನ್ನು ಬಳಿ ತೆರಳಿ ನೋಡಿದಾಗ ಅದರೊಳಗೆ ಸುಶೀಲಮ್ಮ ಅವರ ಮೃತದೇಹ ಕಂಡು ಬಂದಿದೆ.

ಕೂಡಲೇ ಪೊಲೀಸ್‌ ನಿಯಂತ್ರಣ ಕೊಠಡಿಗೆ ಸ್ಥಳೀಯರು ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ತೆರಳಿ ಪರಿಶೀಲಿಸಿದಾಗ ಕೊಲೆ ಹಿಂದೆ ಪರಿಚಿತರ ಕೈವಾಡ ಪತ್ತೆಯಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಮೃತ ಸುಶೀಲಮ್ಮ, ಹಲವು ವರ್ಷಗಳ ಹಿಂದೆ ನಗರಕ್ಕೆ ಬಂದು ನೆಲೆಸಿದ್ದರು. ಮೃತರಿಗೆ ಓರ್ವ ಗಂಡು ಮಗ ಹಾಗೂ ಇಬ್ಬರು ಹೆಣ್ಣು ಮಕ್ಕಳಿದ್ದಾರೆ.

ಆಸ್ತಿ ಮಾರಾಟದಲ್ಲಿ ಬಂದ ಹಣದಲ್ಲಿ ಮನೆ ಬೋಗ್ಯಕ್ಕೆ ಪಡೆದು ಮಕ್ಕಳಿಂದ ಪ್ರತ್ಯೇಕವಾಗಿ ಅಜ್ಜಿ ವಾಸವಾಗಿದ್ದರು. ಅದೇ ಕಟ್ಟಡದಲ್ಲಿ ಅವರ ಕಿರಿಯ ಪುತ್ರಿ ಮತ್ತು ಮಗಳು ಹಾಗೂ ಅಜ್ಜಿ ಮನೆ ಸಮೀಪದಲ್ಲೇ ಅವರ ಮಗ ಕೂಡ ವಾಸವಾಗಿದ್ದರು. ಪ್ರತಿ ತಿಂಗಳು ತಾಯಿಗೆ ₹2-3 ಸಾವಿರವನ್ನು ಪುತ್ರ ನೀಡುತ್ತಿದ್ದರು. ಈ ಹತ್ಯೆಗೆ ನಿಖರವಾಗಿ ಕಾರಣ ಗೊತ್ತಾಗಿಲ್ಲ. ಹಣಕ್ಕಾಗಿ ದಿನೇಶ್ ಎಂಬಾತ ಕೃತ್ಯ ಎಸಗಿರಬಹುದು ಎಂದು ಶಂಕೆ ವ್ಯಕ್ತವಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದು ನಿಖರ ಕಾರಣ ತಿಳಿಯಬೇಕಾಗಿದೆ.

See also  17ರ ಬಾಲಕಿ ಮೇಲೆ ಅತ್ಯಾಚಾರ..! ಮೃತ ವ್ಯಕ್ತಿಯ ವಿರುದ್ಧ ಕೇಸ್‌ ದಾಖಲು..!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget