Latestಬೆಂಗಳೂರುರಾಜಕೀಯರಾಜ್ಯ

ಬಿಜೆಪಿಯಿಂದ ಇಬ್ಬರು ಶಾಸಕರು 6 ವರ್ಷಗಳ ಕಾಲ ಉಚ್ಚಾಟನೆ..! ನಿರ್ಧಾರವನ್ನು ಸ್ವಾಗತಿಸಿದ ಬಿ.ವೈ. ವಿಜಯೇಂದ್ರ‌..!

781

ನ್ಯೂಸ್ ನಾಟೌಟ್: ಶಾಸಕರಾದ ಶಿವರಾಮ್ ಹೆಬ್ಬಾರ್ ಹಾಗೂ ಎಸ್.ಟಿ ಸೋಮಶೇಖರ್ ​ಗೆ ಬಿಜೆಪಿ ಹೈಕಮಾಂಡ್ ಶಾಕ್ ನೀಡಿದೆ. ಇಬ್ಬರನ್ನೂ ಪಕ್ಷ ವಿರೋಧಿ ಚಟುವಟಿಕೆ ಆರೋಪದ ಮೇಲೆ 6 ವರ್ಷಗಳ ಕಾಲ ಉಚ್ಚಾಟನೆ ಮಾಡಿ ಆದೇಶ ಹೊರಡಿಸಿದೆ. ಇವರು ಬಿಜೆಪಿಯಲ್ಲಿ ಇದ್ದುಕೊಂಡು ಕಾಂಗ್ರೆಸ್ ಜೊತೆ ಹೆಚ್ಚು ಗುರುತಿಸಿಕೊಂಡಿದ್ದರು. ಹೀಗಾಗಿ, ಅವರನ್ನು ಉಚ್ಚಾಟನೆ ಮಾಡುವ ನಿರ್ಧಾರವನ್ನು ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿ ತೆಗೆದುಕೊಂಡಿದೆ.

ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಕ್ಷೇತ್ರವನ್ನು ಶಿವರಾಮ್ ಹೆಬ್ಬಾರ್ ಪ್ರತಿನಿಧಿಸುತ್ತಿದ್ದಾರೆ. ಬೆಂಗಳೂರಿನ ಯಶವಂತಪುರ ಕ್ಷೇತ್ರದಿಂದ ಎಸ್.ಟಿ.ಸೋಮಶೇಖರ್ ಮೂರನೇ ಬಾರಿ ಶಾಸಕರಾಗಿ ಆಯ್ಕೆ ಆಗಿದ್ದಾರೆ. ಈ ಮೊದಲು ಇಬ್ಬರೂ ಕಾಂಗ್ರೆಸ್ ​ನಲ್ಲಿ ಗುರುತಿಸಿಕೊಂಡಿದ್ದರು. ಈ ಹಿಂದೆ ಇಬ್ಬರೂ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದರು. ಬಿಜೆಪಿ ಸರ್ಕಾರದ ಅವಧಿಯಲ್ಲಿ ಶಿವರಾಮ್ ಹೆಬ್ಬಾರ್ ಕಾರ್ಮಿಕ ಸಚಿವರಾದರೆ, ಸೋಮಶೇಖರ್ ಸಹಕಾರ ಸಚಿವರಾಗಿದ್ದರು.

2023ರಲ್ಲಿ ಇಬ್ಬರೂ ಬಿಜೆಪಿಯಿಂದ ಸ್ಪರ್ಧಿಸಿ ಗೆದ್ದು ಬಂದರು. ಆದರೆ, ಈಗ ಶಿವರಾಮ್ ಹೆಬ್ಬಾರ್ ಹಾಗೂ ಸೋಮಶೇಖರ್ ಕಾಂಗ್ರೆಸ್ ಪಕ್ಷದ ಜೊತೆ ಹೆಚ್ಚು ಗುರುತಿಸಿಕೊಳ್ಳುತ್ತಿದ್ದರು. ಪಕ್ಷ ವಿರೋಧಿ ಚಟುವಟಿಕೆ ಮಾಡಿದ್ದಕ್ಕಾಗಿ ಇಬ್ಬರನ್ನೂ ಉಚ್ಚಾಟನೆ ಮಾಡಿ ಹೈ ಕಮಾಂಡ್ ಆದೇಶ ಹೊರಡಿಸಿದೆ.

ಈ ಮೊದಲು ಪಕ್ಷ ವಿರೋಧಿ ಆರೋಪದ ಮೇಲೆ ಬಸಗೌಡ ಪಾಟೀಲ್ ಯತ್ನಾಳ್ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿತ್ತು. ಈಗ ಇವರನ್ನೂ ಕೂಡ ಉಚ್ಚಾಟನೆ ಮಾಡಿ, ಪಕ್ಷ ವಿರೋಧಿ ಚಟುವಟಿಕೆ ಮಾಡುವವರಿಗೆ ಬಿಜೆಪಿ ಹೈಕಮಾಂಡ್ ಖಡಕ್ ಸಂದೇಶ ನೀಡಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ‌, ಉಚ್ಛಾಟನೆಯನ್ನು ನಾನು ಸ್ವಾಗತ ಮಾಡುತ್ತೇನೆ ಎಂದಿದ್ದಾರೆ.

ಬಾಂಬ್ ಇಡಲು ಯತ್ನಿಸುತ್ತಿರುವಾಗಲೇ ಆರೋಪಿ ಕೈಯಲ್ಲಿದ್ದ ಬಾಂಬ್ ಸ್ಫೋಟ..! ಆಸ್ಪತ್ರೆಗೆ ದಾಖಲಿಸಿದರೂ ಫಲಿಸದ ಚಿಕಿತ್ಸೆ..!

See also  ‘ಛಾವಾ’ ಸಿನಿಮಾ ನೋಡಿ ರಾತ್ರಿ ನಿಧಿಗಾಗಿ ಕೋಟೆ ಅಗೆಯಲು ಬಂದ ನೂರಕ್ಕೂ ಹೆಚ್ಚು ಜನ..! ಛತ್ರಪತಿ ಶಿವಾಜಿ ಪುತ್ರನ ಕಥೆಯಲ್ಲಿ ನಿಧಿಯ ಉಲ್ಲೇಖ..!
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget