ದೇಶ-ವಿದೇಶರಾಜಕೀಯವೈರಲ್ ನ್ಯೂಸ್

ಬಿಜೆಪಿ ಹೈಕಮಾಂಡ್ ನಾಯಕರನ್ನ ಭೇಟಿಯಾದ ನಿಖಿಲ್ ಕುಮಾರಸ್ವಾಮಿ..! ದೊಡ್ಡ ಜವಾಬ್ದಾರಿ ತೆಗೆದುಕೊಳ್ಳುವ ಮುನ್ನ ರಾಷ್ಟ್ರೀಯ ನಾಯಕರ ಭೇಟಿ..?

230

ನ್ಯೂಸ್ ನಾಟೌಟ್: ಜೆಡಿಎಸ್​ ಯುವ ಘಟಕದ ರಾಜ್ಯಾಧ್ಯಕ್ಷರಾದ ನಿಖಿಲ್​ ಕುಮಾರಸ್ವಾಮಿಗೆ ರಾಜ್ಯಾಧ್ಯಕ್ಷ ಹುದ್ದೆ ನೀಡಲು ಜೆಡಿಎಸ್ ನಲ್ಲಿ ತಯಾರಿ ನಡೆದಿವೆ. ಈ ಬಗ್ಗೆ ಜೆಡಿಎಸ್ ವರಿಷ್ಠ ಎಚ್ ​ಡಿ ದೇವೇಗೌಡ ನಿಖಿಲ್​ ರಾಜ್ಯಾಧ್ಯಕ್ಷರಾಗುವ ಸುಳಿವು ನೀಡಿದ್ದಾರೆ. ಹೀಗಾಗಿ ಜೆಡಿಎಸ್ ರಾಜ್ಯಾಧ್ಯಕ್ಷರಾಗುವುದು ಖಚಿತವಾಗುತ್ತಿದ್ದಂತೆಯೇ ನಿಖಿಲ್ ಕುಮಾರಸ್ವಾಮಿ, ದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ನಾಯಕರನ್ನು ಭೇಟಿಯಾಗಿ ವಿಶ್ವಾಸಕ್ಕೆ ತೆಗೆದುಕೊಳ್ಳುವ ಕೆಲಸಕ್ಕೆ ಮುಂದಾಗಿದ್ದಾರೆ. ಅಲ್ಲದೇ ಕರ್ನಾಟಕದಲ್ಲಿ ಮುಂಬರುವ ಸ್ಥಳೀಯ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಬಗ್ಗೆ ಚರ್ಚಿಸಿದ್ದಾರೆ ಎನ್ನಲಾಗಿದೆ.

ಕರ್ನಾಟಕ ಬಿಜೆಪಿ ಉಸ್ತುವಾರಿ ರಾಧಮೋಹನ್ ದಾಸ್, ಕೇಂದ್ರ ಗೃಹ ಸಚಿವ ಅಮಿತ್ ಶಾ , ಸಂಘಟನಾ ಕಾರ್ಯದರ್ಶಿ ಬಿಎಲ್​ ಸಂತೋಷ್ ಸೇರಿದಂತೆ ಹಲವು ಹೈಕಮಾಂಡ್ ನಾಯಕರನ್ನು ಭೇಟಿಯಾಗಿ ಮುಂದಿನ ರಾಜಕಾರಣ ಹಾಗೂ ಮೈತ್ರಿ ಬಗ್ಗೆ ಮಾತುಕತೆ ನಡೆಸಿದ್ದಾರೆ. ಜೆಡಿಎಸ್ ರಾಜ್ಯಾಧ್ಯಕ್ಷರಾದ ಮೇಲೆ ಎಲ್ಲಾ ಪಕ್ಷದಲ್ಲಿನ ಕಾರ್ಯಚಟುವಟಿಕೆಗಳು, ಸೇರಿದಂತೆ ಮೈತ್ರಿ ಪಕ್ಷ ಬಿಜೆಪಿಯೊಂದಿಗೆ ಅನ್ಯೂನ್ಯ ಸಂಬಂಧ ಹೊಂದಿರಬೇಕಾಗುತ್ತದೆ. ಹೀಗಾಗಿ ನಿಖಿಲ್ ಕುಮಾರಸ್ವಾಮಿ, ರಾಜ್ಯಾಧ್ಯಕ್ಷರಾಗುವ ಮೊದಲೇ ಬಿಜೆಪಿ ಹೈಕಮಾಂಡ್ ನಾಯಕರನ್ನು ಭೇಟಿಯಾಗಿ ವಿಶ್ವಾಸಕ್ಕೆ ತೆಗೆದುಕೊಳ್ಳುವ ಪ್ರಯತ್ನ ನಡೆಸಿದ್ದಾರೆ.

ಇಂದು (ಡಿಸೆಂಬರ್ 09) ನವದೆಹಲಿಯಲ್ಲಿ ಅಮಿತ್ ಶಾ ಭೇಟಿಯಾಗಿ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಿಖಿಲ್ ಕುಮಾರಸ್ವಾಮಿ, ಅತ್ಯಂತ ಗೌರವಪೂರ್ವಕವಾಗಿ ಅಮಿತ್ ಶಾ ಅವರನ್ನು ಸಂಸತ್ ಭವನದ ಅವರ ಕಚೇರಿಯಲ್ಲಿ ಮಧ್ಯಾಹ್ನ 12 ಗಂಟೆಗೆ ಭೇಟಿ ಮಾಡಲಾಯಿತು. ಚನ್ನಪಟ್ಟಣ ಫಲಿತಾಂಶದ ಕುರಿತಾದ ಮಾಹಿತಿಯನ್ನು ಅವರೊಂದಿಗೆ ಹಂಚಿಕೊಂಡೆ ಹಾಗೂ ಅವರು ಕೂಡ ನನಗೆ ಧೈರ್ಯ ತುಂಬಿ ಉತ್ತಮವಾಗಿ ಕೆಲಸ ಮಾಡುವಂತೆ ಹುರಿದುಂಬಿಸಿದರು. ಅಲ್ಲದೆ, ಮುಂಬರುವ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ಬಗ್ಗೆ ಅವರಲ್ಲಿ ಚರ್ಚೆ ನಡೆಸಲಾಯಿತು. ಮೈತ್ರಿಕೂಟಗಳ ಎರಡೂ ಪಕ್ಷಗಳು ಒಟ್ಟಾಗಿ ಹೋಗಬೇಕು. ತಳಮಟ್ಟದಲ್ಲಿ ಎನ್ ಡಿಎ ಮೈತ್ರಿಕೂಟವನ್ನು ಬಲಪಡಿಸುವ ನಿಟ್ಟಿನಲ್ಲಿ ಅಮಿತ್ ಶಾ ಅವರು ನನಗೆ ಮಾರ್ಗದರ್ಶನ ಮಾಡಿದರು ಎಂದರು.

Click

https://newsnotout.com/2024/12/syria-under-attack-kannada-news-viral-news-s-russia-d/
https://newsnotout.com/2024/12/uppinangady-nekkilady-kannada-news-ambulance-hits-home-ground/
https://newsnotout.com/2024/12/toilet-issue-kannada-news-rented-people-9-dna-test-viral-news/
https://newsnotout.com/2024/12/kananda-news-bomb-viral-news-viral-news-police/
https://newsnotout.com/2024/12/kannada-news-bus-viral-news-belagavi-viral-news-s/
https://newsnotout.com/2024/12/monkey-kannada-news-viral-news-railway-monkey/
See also  ಜೆಡಿಎಸ್‌ ಶಾಸಕಿಗೆ ಕಾಂಗ್ರೆಸ್ ಗೆ ಬರುವಂತೆ ವೇದಿಕೆ ಮೇಲೆ ಓಪನ್ ಆಫರ್ ನೀಡಿದ ಶಿಕ್ಷಣ ಸಚಿವ..! ಡ್ಯಾಂಗಳ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ರಾಜಕೀಯ ಬೆಳವಣಿಗೆ..!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget