ಕ್ರೈಂದೇಶ-ವಿದೇಶ

ಬಿಜೆಪಿ ಕಚೇರಿಯಲ್ಲಿ ಪಕ್ಷದ ಕಾರ್ಯಕರ್ತನ ಶವ ಪತ್ತೆ..! ಮಹಿಳೆಯ ಬಂಧನ..!

ನ್ಯೂಸ್ ನಾಟೌಟ್: ಬಿಜೆಪಿ ಪಕ್ಷದ ಕಚೇರಿಯಲ್ಲಿ ಕಾರ್ಯಕರ್ತನ ಶವ ಪತ್ತೆಯಾಗಿದ್ದು, ಕೊಲೆ ಆರೋಪದ ಮೇಲೆ ಮಹಿಳೆಯೊಬ್ಬಳನ್ನು ಪೊಲೀಸರು ಬಂಧಿಸಿದ ಘಟನೆ ಪಶ್ಚಿಮ ಬಂಗಾಳದ ಉಸ್ತಿಯಲ್ಲಿ ನಡೆದಿದೆ. ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಪೃಥ್ವಿರಾಜ್ ನಸ್ಕರ್ ಎಂಬ ಕಾರ್ಯಕರ್ತ ಪಕ್ಷದ ಸಾಮಾಜಿಕ ಜಾಲತಾಣ ಖಾತೆಗಳನ್ನು ನಿರ್ವಹಿಸುತ್ತಿದ್ದರು. ಶುಕ್ರವಾರ( ನ.8) ರಾತ್ರಿ ಪಕ್ಷದ ಕಚೇರಿಯಲ್ಲಿ ನಸ್ಕರ್ ಅವರ ರಕ್ತಸಿಕ್ತ ಶವ ಪತ್ತೆಯಾಗಿತ್ತು. ನವೆಂಬರ್ 5 ರಿಂದ ಅವರು ನಾಪತ್ತೆಯಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಕಾರ್ಯಕರ್ತನ ಕೊಲೆಗೆ ಸಂಬಂಧಿಸಿದಂತೆ ಬಿಜೆಪಿಯು ತೃಣಮೂಲ ಕಾಂಗ್ರೆಸ್‌ ನ (ಟಿಎಂಸಿ) ಕೈವಾಡವಿದೆ ಎಂದು ಆರೋಪಿಸಿದೆ. ಕೊಲೆ ಸಂಬಂಧ ಪೊಲೀಸರು ಮಹಿಳೆಯೊಬ್ಬರನ್ನು ಬಂಧಿಸಿದ್ದು, ಈ ಕೊಲೆ ವೈಯಕ್ತಿಕ ವಿಚಾರಕ್ಕೆ ನಡೆದಿರಬಹುದು ಎಂದು ಪೊಲೀಸರು ಹೇಳಿದ್ದಾರೆ.

ಬಂಧಿತ ಮಹಿಳೆ, ನಾಸ್ಕರ್‌ ಗೆ ಹರಿತವಾದ ಆಯುಧಗಳಿಂದ ಹೊಡೆದು ಆತನನ್ನು ಹತ್ಯೆಗೈದಿರುವುದಾಗಿ ಆಕೆ ಒಪ್ಪಿಕೊಂಡಿದ್ದಾಳೆ. ಆಕೆಗೆ ಬೇರೆ ಯಾರಾದರೂ ನೆರವು ನೀಡಿದ್ದಾರೆಯೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Click

https://newsnotout.com/2024/11/collage-students-beard-issue-kannada-news-govt-college/

Related posts

ಸ್ಪಂದನಾ ಪಾರ್ಥಿವ ಶರೀರ ಇಂದು ರಾತ್ರಿ ಬೆಂಗಳೂರಿಗೆ ಆಗಮನ, ವಿಳಂಬಕ್ಕೆ ಕಾರಣವೇನು? ನಾಳೆ ಬೆಂಗಳೂರಿನಲ್ಲೇ ಅಂತ್ಯಕ್ರಿಯೆ, ಇಲ್ಲಿದೆ ಸಂಪೂರ್ಣ ವಿವರ

ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರ ಬಾವ ಇನ್ನಿಲ್ಲ

ಬಂಟ್ವಾಳ: ರಿಕ್ಷಾ-ಬೈಕ್‌ ನಡುವೆ ಅಪಘಾತ! ಸವಾರರು ಗಂಭೀರ..!