ಬಂಟ್ವಾಳ: ಬಿಜೆಪಿ ಮುಖಂಡನ ಮೇಲೆ ಮಂಗಳವಾರ ತಲವಾರು ದಾಳಿ ನಡೆದಿರುವ ಘಟನೆ ಬಂಟ್ವಾಳದಲ್ಲಿ ನಡೆದಿದೆ. ಬಂಟ್ವಾಳ ತಾಲೂಕು ಬಡಗ ಬೆಳ್ಳೂರು ನಿವಾಸಿ ಬಿಜೆಪಿ ಅಮ್ಟಾಡಿ ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಬೆಳ್ಳೂರು ಮೇಲೆ ಭಜರಂಗದಳ ಕಾರ್ಯಕರ್ತರು ಎನ್ನಲಾದ ನಿತಿನ್ ಬಡಗಬೆಳ್ಳೂರು, ನಿಶಾಂತ್ ಬಡಗಬೆಳ್ಳೂರು, ಪವನ್ ಕುಮ್ಡೇಲ್ ಹಾಗೂ ಇನ್ನಿತರರು ತಲವಾರು ಸಹಿತ ಮನೆಗೆ ನುಗ್ಗಿ ಮಾರಣಾಂತಿಕ ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ಈ ವೇಳೆ ತಡೆಯಲು ಬಂದ ಪ್ರಕಾಶ್ ಅವರ ತಾಯಿ ಮತ್ತು ಅಣ್ಣನಿಗೆ ದುಷ್ಕರ್ಮಿಗಳು ಕೊಲೆ ಬೆದರಿಕೆ ಹಾಕಿದ್ದಾರೆ. ಗಲಭೆಯ ಸಂದರ್ಭ ಜನ ಸೇರಿದ್ದನ್ನು ಕಂಡು ಆರೋಪಿಗಳು ಪರಾರಿ ಆಗಿದ್ದಾರೆ. ಎನ್ನಲಾಗಿದೆ. ಮಾರಣಾಂತಿಕ ದಾಳಿಗೊಳಗಾದ ಪ್ರಕಾಶ್ ಬೆಳ್ಳೂರು ಬಂಟ್ವಾಳ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
previous post