ಕ್ರೈಂ

ಬಿಜೆಪಿ ಮುಖಂಡನ ಹತ್ಯೆಗೆ ದಿನಕ್ಕೊಂದು ಟ್ವಿಸ್ಟ್

481

ನ್ಯೂಸ್ ನಾಟೌಟ್: ಹೆರೋಹಳ್ಳಿ ವಾರ್ಡ್ ನ ಬಿಜೆಪಿ ಮುಖಂಡ ಬಿ.ಪಿ. ಅನಂತರಾಜು (46) ಆತ್ಮಹತ್ಯೆ ಪ್ರಕರಣದ ತನಿಖೆ ಮುಂದುವರಿದಿದೆ. ಅವರು ನೇಣು ಹಾಕಿಕೊಳ್ಳಲು ಬಳಸಿದ್ದರು ಎನ್ನಲಾದ ವೇಲ್ ಅರ್ಧ ಸುಟ್ಟಿರುವ ಸ್ಥಿತಿಯಲ್ಲಿ ಪೊಲೀಸರಿಗೆ ಸಿಕ್ಕಿದೆ.

‘ಹನಿಟ್ರ್ಯಾಪ್ ಜಾಲಕ್ಕೆ ಸಿಲುಕಿ ಪತಿ ಅನಂತರಾಜು ಮೇ 12ರಂದು ಸಂಜೆ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ’ ಎಂಬುದಾಗಿ ಪತ್ನಿ ಸುಮಾ ದೂರು ನೀಡಿದ್ದರು. ಎಫ್‌ಐಆರ್ ದಾಖಲಿಸಿಕೊಂಡಿದ್ದ ಪೊಲೀಸರು, ಕೆ.ಆರ್.ಪುರ ನಿವಾಸಿ ರೇಖಾ ಹಾಗೂ ಇತರರನ್ನು ಬಂಧಿಸಿದ್ದರು. ಅನಂತರಾಜು ಸಾವಿಗೆ ಪತ್ನಿ ಸುಮಾ ಕಾರಣ’ ಎಂಬುದಾಗಿ ಬಂಧಿತ ಆರೋಪಿಗಳು ಹೇಳಿಕೆ ನೀಡಿದ್ದರಿಂದ, ಪ್ರಕರಣ ಹೊಸ ಆಯಾಮ ಪಡೆದುಕೊಂಡಿದೆ. ಪತ್ನಿ ಮೇಲೂ ಅನುಮಾನ ವ್ಯಕ್ತಪಡಿಸಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

See also  ಓಲಾ ಸ್ಕೂಟರ್‌ ರಿಪೇರಿಗೆ 90,000 ರೂ. ಬಿಲ್ ನೋಡಿ ಶಾಕ್ ಆದ ಗ್ರಾಹಕ..! ಶೋ ರೂಮ್‌ ಮುಂದೆಯೇ ಓಲಾ ಸ್ಕೂಟರ್‌ ಅನ್ನು ಪುಡಿ ಮಾಡಿದ ವ್ಯಕ್ತಿ..! ಇಲ್ಲಿದೆ ವಿಡಿಯೋ
  Ad Widget   Ad Widget   Ad Widget   Ad Widget   Ad Widget   Ad Widget   Ad Widget   Ad Widget