ಕರಾವಳಿ

ಮುಸ್ಲಿಂ ಮಹಿಳೆಯ ಮನೆಗೆ ನುಗ್ಗಿ ಹಲ್ಲೆ ?

598

ನ್ಯೂಸ್ ನಾಟೌಟ್: ಬಿಜೆಪಿ ಕಾರ್ಯಕರ್ತರ ತಂಡವೊಂದು ಕಡಬದ ಬೋಳ್ಪಾಡಿಯಲ್ಲಿ ಮುಸ್ಲಿಂ ಮಹಿಳೆಯ ಮನೆಗೆ ನುಗ್ಗಿ ಹಲ್ಲೆ ಮಾಡಿದ್ದಾರೆ ಅನ್ನುವ ಆರೋಪ ಕೇಳಿ ಬಂದಿದೆ. ಶುಕ್ರವಾರ ತಡರಾತ್ರಿ ಘಟನೆ ನಡೆದಿದೆ ಎನ್ನಲಾಗಿದ್ದು ಬಿಜೆಪಿ ಕಾರ್ಯಕರ್ತರ ವಿರುದ್ಧ ಪೊಲೀಸ್ ದೂರು ದಾಖಲಾಗಿದೆ. ಗಾಯಗೊಂಡಿದ್ದಾರೆ ಎನ್ನಲಾದ ಮಹಿಳೆ ಸದ್ಯ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ವರದಿಯಾಗಿದೆ.

ಘಟನೆಗೆ ನಿಖರವಾದ ಕಾರಣ ಏನು ಎನ್ನುವುದು ತಿಳಿದು ಬಂದಿಲ್ಲ. ಮನೆಯ ಕಿಟಕಿ, ಗಾಜು ಒಡೆದು ಮಕ್ಕಳು , ಮಹಿಳೆಯ ಮೇಲೆ ಹಲ್ಲೆ ನಡೆದಿದೆ ಎಂದು ಪೊಲೀಸ್ ದೂರಿನಲ್ಲಿ ತಿಳಿಸಲಾಗಿದೆ. ಈ ಬಗ್ಗೆ ಕಡಬ ಪೊಲೀಸರು ಐವರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

See also  ಸವಣೂರು: ಕೆರೆಯ ಪಾಚಿ ತೆಗೆಯಲು ಹೋದ ಯುವಕ ಈಜು ಬಾರದೆ ಮೃತ್ಯು!
  Ad Widget     Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget